ಶನಿವಾರ, ಮೇ 15, 2021
24 °C

ಪ್ರಗತಿ ಜ್ಞಾನ ಬಿತ್ತಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೀಣ್ಯ ದಾಸರಹಳ್ಳಿ: `ಶಿಕ್ಷಣ ನೀಡುವಾಗಲೇ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಆಂತರಿಕ ಪ್ರಗತಿಯ ಜ್ಞಾನವನ್ನು ಬಿತ್ತಬೇಕು. ಆಗ ಸಾಮಾಜಿಕ ಪರಿವರ್ತನೆ ತರಲು ಸಾಧ್ಯವಾಗುತ್ತದೆ' ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು.ಮಂಜುನಾಥ ಸೇವಾ ಸಂಸ್ಥೆಯ ಆಶ್ರಯದಲ್ಲಿ ಪೀಣ್ಯದಲ್ಲಿ ಬುಧವಾರ ನಡೆದ ವಿದ್ಯಾ ಸೌಧ ಪಬ್ಲಿಕ್ ಸ್ಕೂಲ್‌ನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, `ಪುರಾತನ ಕಾಲದಲ್ಲಿ ಭಾರತೀಯ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿದ್ದ ವಿದೇಶಿಯರ ಸಂಖ್ಯೆ ದೊಡ್ಡದು ಇತ್ತು. ವಿಜ್ಞಾನದ ಬೆಳವಣಿಗೆಯಿಂದ ಭಾರತೀಯರು ವಿದೇಶದಲ್ಲಿ ಶಿಕ್ಷಣ ಪಡೆಯುವ ಸ್ಥಿತಿ ನಿರ್ಮಾಣವಾಯಿತು' ಎಂದರು.`ಶಿಕ್ಷಣ ಸಂಸ್ಥೆಗಳು ಭಾರತೀಯ ಸಂಸ್ಕೃತಿ, ಪರಂಪರೆಯ ಬಗ್ಗೆ ಅರಿವು ಮೂಡಿಸಬೇಕು. ಆಗ ವಿದ್ಯಾರ್ಥಿಗಳು ಸಮಾಜಮುಖಿಯಾಗುತ್ತಾರೆ' ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.