ಪ್ರಚಾರಕ್ಕಾಗಿ ಸಮಾಜ ಸೇವೆ ಸಲ್ಲದು

7

ಪ್ರಚಾರಕ್ಕಾಗಿ ಸಮಾಜ ಸೇವೆ ಸಲ್ಲದು

Published:
Updated:

ಬೆಳಗಾವಿ: ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದ ಸಮುದಾಯಗಳಿಗೆ ಕಾನೂನಿನ ಅವಕಾಶಗಳನ್ನು ತಲುಪಿಸಿ ಸಶಕ್ತರನ್ನಾಗಿ ಮಾಡಬೇಕು. ಯುವಕರು ಸಮಾಜ ಸೇವೆಯನ್ನು ಕೇವಲ ಪ್ರಚಾರಕ್ಕಾಗಿ ಮಾಡಬಾರದು” ಎಂದು ನಿವೃತ್ತ ನ್ಯಾಯಾಧೀಶ ಜಿನದತ್ತ ದೇಸಾಯಿ ಕರೆ ನೀಡಿದರು.ನವದೆಹಲಿಯ ರಾಷ್ಟ್ರೀಯ ಮಹಿಳಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಕಲ್ಯಾಣ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಕಾನೂನು ಸಾಕ್ಷರತಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಚಾರ್ಯ ಡಾ. ಬಸವರಾಜ ಜಗಜಂಪಿ ಮಾತನಾಡಿ, ಯುವಜನಾಂಗ ಓದುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಸಾಕ್ಷರರಾದವರು ಕಾನೂನುಗಳನ್ನು ಪಾಲಿಸಬೇಕು, ಅಂದಾಗ ಮಾತ್ರ ವರದಕ್ಷಿಣೆ, ಭ್ರೂಣ ಹತ್ಯೆ, ಬಾಲ್ಯವಿವಾಹದಂತಹ ಸಮಾಜಿಕ ಪಿಡುಗುಗಳನ್ನು ನಿರ್ಮೂಲನೆ ಮಾಡಬಹುದು ಎಂದರು.ಬೆಂಗಳೂರಿನ ಯಶಸ್ವಿ ಟೌನ್‌ಶಿಪ್‌ನ ವ್ಯವಸ್ಥಾಪನ ನಿರ್ದೇಶಕ ಎ.ಎಸ್.ಪಾಟೀಲ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಅಜ್ಞಾನದಿಂದ ಅನೇಕ ಜನರು ದಿನೇ ದಿನೇ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ. ಸಾಮಾಜಿಕ ಕಾರ್ಯಕರ್ತರು ವಿವಿಧ ಕಾನೂನುಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಮಹತ್ವದ ಪಾತ್ರವಹಿಸಬೇಕು ಎಂದು ಹೆಳಿದರು.ಮಹಿಳೆ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಬಿ.ಎ.ವಂಟಮೂರಿ, ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ಆನಂದ ಲೋಬೊ, ಸಲಹಾಗಾರ ಜೆ.ಟ.ಲೋಕೇಶ, ಬಿ.ಕೆ.ವಿದ್ಯಾ ದೇಶಪಾಂಡೆ, ಅಶೋಕ ಹಲಗಲಿ ವಿವಿಧ ಕಾನೂನುಗಳ ಕುರಿತು ಮಾಹಿತಿ ನೀಡಿದರು.ಜ್ಯೋತಿ ಬದಾಮಿ, ವಿಜಯಾ ಹಿರೇಮಠ, ಮಹಿಳಾ ಕಲ್ಯಾಣ ಸಂಸ್ಥೆಯ ಅಧ್ಯಕ್ಷೆ ಸರೋಜಿನಿ ಪಾಟೀಲ, ಕಾರ್ಯದರ್ಶಿ ವೈಜಯಂತಿ ಚೌಗಲಾ ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ಭಾಗವಹಿಸಿದ್ದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕಿರಣ ಚೌಗಲಾ ಸ್ವಾಗತಿಸಿದರು. ದೀಪಾ ಅರಗಂಜಿ ನಿರೂಪಿಸಿದರು. ಆನಂದ ಅಬ್ಬಾರ ವಂದಿಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry