ಶುಕ್ರವಾರ, ಜೂನ್ 25, 2021
29 °C

ಪ್ರಚಾರಕ್ಕೆ ಬಿಎಸ್‌ವೈ ಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಪರವಾಗಿ ಪ್ರಚಾರ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕೋರುವುದಾಗಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.

ಗೃಹ ಕಚೇರಿ `ಕೃಷ್ಣಾ~ದಲ್ಲಿ ಸೋಮವಾರ ಜನತಾ ದರ್ಶನದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, `ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಬರುವುದರಿಂದ ನನಗೆ ಯಾವ ರೀತಿಯಲ್ಲೂ ಮುಜುಗರ ಆಗುವುದಿಲ್ಲ. ಪ್ರಚಾರಕ್ಕೆ ಬರುವಂತೆ ಯಡಿಯೂರಪ್ಪ ಅವರನ್ನು ಖುದ್ದು ಭೇಟಿ ಮಾಡಿ ಆಹ್ವಾನ ನೀಡುತ್ತೇನೆ~ ಎಂದು ಹೇಳಿದರು.

`ಕೇಂದ್ರ ನಾಯಕರು ಇಲ್ಲ~: ಗೋವಾದ ನೂತನ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಉಡುಪಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಇದೇ 16ರಂದು ಪ್ರಚಾರ ಕೈಗೊಳ್ಳಲಿದ್ದಾರೆ. ಆದರೆ ಪಕ್ಷದ ರಾಷ್ಟ್ರೀಯ ನಾಯಕರು ಪ್ರಚಾರಕ್ಕೆ ಬರುತ್ತಿಲ್ಲ. ಉಪ ಚುನಾವಣೆಯನ್ನು ರಾಜ್ಯದ ನಾಯಕರೇ ನಿಭಾಯಿಸಲಿದ್ದಾರೆ. ಪಕ್ಷದ ಅಭ್ಯರ್ಥಿ ಜಯ ಗಳಿಸಲಿದ್ದಾರೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.