ಬುಧವಾರ, ನವೆಂಬರ್ 20, 2019
27 °C

ಪ್ರಚಾರ ಆರಂಭಿಸಿದ ಭರಣಿ

Published:
Updated:

ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸುಭಾಷ್ ಭರಣಿ ಅವರು ಬುಧವಾರ ಶೇಷಾದ್ರಿಪುರದ ಆಂಜನೇಯ ಬ್ಲಾಕ್‌ನಿಂದ ಚುನಾವಣಾ ಪ್ರಚಾರ ಆರಂಭಿಸಿದರು.ಕೋಡಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, `ಗಾಂಧಿನಗರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಪರಿಹಾರಕ್ಕೆ ಶ್ರಮಿಸುತ್ತೇನೆ' ಎಂದರು.`ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಕೊಳೆಗೇರಿಗಳಿದ್ದು, ಬಡತನ ರೇಖೆಗಿಂತ ಕೆಳಮಟ್ಟದಲ್ಲಿ ವಾಸಿಸುತ್ತಿರುವವರ ಸಂಖ್ಯೆ ಅಧಿಕವಾಗಿದೆ. ಹಲವರು ಪಡಿತರ ಚೀಟಿಗಳಿಂದ ವಂಚಿತರಾಗಿದ್ದಾರೆ. ಇಲ್ಲಿನ ಬಹುತೇಕ ಯುವಜನರು ನಿರುದ್ಯೋಗಿಗಳಾಗಿದ್ದು, ಅವರಿಗೆ ಸೂಕ್ತ ಉದ್ಯೋಗ ಕಲ್ಪಿಸುವ ಅಗತ್ಯವಿದೆ. ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು' ಎಂದು ಭರಣಿ ಹೇಳಿದರು.`ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಅಭಿವೃದ್ಧಿಗೆ ಉತ್ತಮ ಯೋಜನೆಗಳನ್ನು ಕೈಗೊಂಡಿದ್ದಾರೆ. ಆದ್ದರಿಂದ ಅವರನ್ನು ಮತ್ತೆ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುವುದೇ ನಮ್ಮ ಗುರಿ' ಎಂದು ಅವರು ತಿಳಿಸಿದರು.

ಪ್ರತಿಕ್ರಿಯಿಸಿ (+)