ಗುರುವಾರ , ಫೆಬ್ರವರಿ 27, 2020
19 °C

ಪ್ರಜಾಪತಿ ಪ್ರಕರಣ, ಸಿಬಿಐ ತನಿಖೆಗೆ ಕೋರ್ಟ್ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ, (ಪಿಟಿಐ/ ಐಎಎನ್ಎಸ್): ಮಾಜಿ ರಾಜ್ಯ ಸಚಿವ ಅಮಿತ್ ಷಾ ಭಾಗಿಯಾಗಿದ್ದಾರೆನ್ನಲಾದ , ಶೋರಾಬುದ್ದೀನ್ ಶೇಖ್ ಅವರ ನಕಲಿ ಎನ್ ಕೌಂಟರ್ ಪ್ರಕರಣದ ಪ್ರತ್ಯಕ್ಷದರ್ಶಿ ಎಂದು ಹೇಳಲಾಗುವ ತುಳಸಿರಾಮ್ ಪ್ರಜಾಪತಿಯ ಎನ್ ಕೌಂಟರ್ ಹತ್ಯೆ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ನ ಈ ಆದೇಶ ಗುಜರಾತಿನಲ್ಲಿರುವ ಬಿಜೆಪಿ ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ.

ಈ ಸಂಬಂಧ ರಾಜ್ಯ ಪೊಲೀಸರು ತನಿಖೆ ನಡೆಸಿ ಆರೋಪ ಪಟ್ಟಿ ಸಿದ್ಧಪಡಿಸಿರುವ ಸಂದರ್ಭದಲ್ಲಿ  ಮತ್ತೆ ಸಿಬಿಐ ತನಿಖೆಯ ಅಗತ್ಯವಿಲ್ಲ ಎಂಬ ಗುಜರಾತ್ ಸರ್ಕಾರದ ವಾದವನ್ನು ನ್ಯಾಯಮೂರ್ತಿಗಳಾದ ಪಿ. ಸತ್ಯಶಿವಂ ಮತ್ತು ಬಿ.ಎಸ್. ಚೌಹಾಣ್ ಅವರಿದ್ದ ಸುಪ್ರೀಂ ಕೋರ್ಟ್ ನ  ದ್ವಿಸದಸ್ಯ ಪೀಠ ತಿರಸ್ಕರಿಸಿದೆ.

ಶೋರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರಬಿ ಅವರನ್ನು ನಕಲಿ ಎನ್ ಕೌಂಟರ್ ನಲ್ಲಿ ಹತ್ಯೆಮಾಡಿದ ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿದ್ದ ತಮ್ಮ ಮಗ ತುಳಸಿರಾಂ ಪ್ರಜಾಪತಿಯನ್ನು ಗುಜರಾತ್ ಪೊಲೀಸರು  ನಕಲಿ ಎನ್ ಕೌಂಟರ್ ಮೂಲಕ ಕೊಲೆ ಮಾಡಿದ್ದಾರೆ ಎಂದು  ಆರೋಪಿಸಿ ಅವರ ತಾಯಿ ನರ್ಮದಾ ಬಾಯಿ ಸುಪ್ರೀಂ ಕೋರ್ಟ್ ಗೆ  ಮೇಲ್ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)