ಮಡಿಕೇರಿ: ಮಾಧ್ಯಮಗಳು ಜನರ ನಾಡಿ ಮಿಡಿತವನ್ನು ಅರಿತುಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಗೆ ಪೂರಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಸಚಿವ ಬಿ.ಎ.ಜೀವಿಜಯ ಕರೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ಭಾನುವಾರ ನಡೆದ ಪ್ರಶಸ್ತಿ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಧಾರ್ಮಿಕ ವಿಚಾರಗಳನ್ನು ಪ್ರತಿಪಾದನೆ ಮಾಡಬೇಕಾದ ಧರ್ಮಗುರುಗಳು ಇಂತಹವರೇ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿಕೆ ನೀಡುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮವಾದ ಬೆಳವಣಿಗೆಯಲ್ಲ ಎಂದು ಅವರು ಹೇಳಿದರು.

ಸಂವಿಧಾನ ಬದ್ಧ ಹಕ್ಕು ಚಲಾಯಿಸಿ ನಮಗೆ ಬೇಕಾದ ಸರಕಾರಗಳನ್ನು ರಚಿಸಿಕೊಳ್ಳುವ ವ್ಯವಸ್ಥೆ ಇರುವ ಈ ಸಂದರ್ಭದಲ್ಲಿ ಇಂತಹ ಬೆಳವಣಿಗೆಗಳನ್ನು ನೋಡಿದರೆ ನಾವೆಲ್ಲೊ ಎಡವಿದ್ದೇವೆ ಅನಿಸುತ್ತದೆ ಎಂದು ಅಸಮಾಧಾನಪಟ್ಟರು.

ಪತ್ರಕರ್ತರಿಗೆ ಗುರುತಿನ ಚೀಟಿ ವಿತರಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಮೊದಲಿಯಾರ್ ಮಾತನಾಡಿ, ಸಾಮಾಜಿಕ ಜವಾಬ್ದಾರಿಯನ್ನು ಮಾಧ್ಯಮ ಪ್ರತಿನಿಧಿಗಳು ಮರೆಯುತ್ತಿದಾರೆಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳುವ ಸಮಯ ಬಂದಿದೆ. ದೃಶ್ಯ ಮಾಧ್ಯಮಗಳು ಹಾಗೂ ಮುದ್ರಣ ಮಾಧ್ಯಮಗಳು ತಮ್ಮ ನಡುವಿನ ಸ್ಪರ್ಧೆಯ ಸಂಘರ್ಷವನ್ನು ಬದಿಗಿಟ್ಟು ಒಗ್ಗಟ್ಟು ಮತ್ತು ಚಿಂತನೆಯ ದಿಕ್ಕಿನಲ್ಲಿ ಹೆಜ್ಜೆ ಇಡಬೇಕು ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಮಟ್ಟದ ಸಮ್ಮೇಳನವನ್ನು ಬೀದರ್ನಲ್ಲಿ ಮೇ ತಿಂಗಳ ಎರಡನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ವಿಚಾರ ಸಂಕಿರಣವನ್ನೂ ಹಮ್ಮಿಕೊಳ್ಳಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ರಾಜು ಮಾತನಾಡಿದರು. ಸಂಘದ ರಾಜ್ಯ ಸಮಿತಿ ನಿರ್ದೇಶಕ ಎಸ್.ಎ.ಮುರುಳೀಧರ್, ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿರುವ ಬಿ.ಜಿ.ಅನಂತಶಯನ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀಧರ್ ನೆಲ್ಲಿತ್ತಾಯ್, ಸೋಮವಾರಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಯ್ಯದ್ ಇರ್ಫಾನ್, ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರವೀಣ್ ಉತ್ತಪ್ಪ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.