ಮಂಗಳವಾರ, ಜೂನ್ 15, 2021
20 °C

ಪ್ರಜಾಪ್ರಭುತ್ವ ಮೌಲ್ಯ ಉಳಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯ ಬಿಜೆಪಿ ಮುಖಂಡರು ಗುಂಪುಗಾರಿಕೆಯಲ್ಲಿ ತೊಡಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನೆಲ್ಲ ಗಾಳಿಗೆ ತೂರಿದ್ದಾರೆ. ತಮ್ಮ ಬೆಂಬಲಿಗ ಶಾಸಕ, ಸಚಿವರನ್ನು ರೆಸಾರ್ಟ್‌ಗಳಿಗೆ ಕರೆದೊಯ್ದು ಕಾಲಹರಣ ಮಾಡುತ್ತಿದ್ದಾರೆ.

 

ಜಾತಿ ಆಧಾರದ ರಾಜಕಾರಣ ಮಾಡುವ ಪ್ರವೃತ್ತಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದುದು. ಇದರಿಂದ ರಾಜ್ಯದ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಎಂದು ಅವರಿಗೆ ಅನ್ನಿಸಿಯೇ ಇಲ್ಲ.ರಾಜ್ಯದಲ್ಲಿ ಈಗ ಬರಗಾಲವಿದೆ. ನೀರಿನ ಕೊರತೆ ಇದೆ. ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ವಿಶೇಷ ಅನುದಾನ ಪಡೆದು ಜನರಿಗೆ ನೆರವಾಗುವ ಪ್ರಯತ್ನವನ್ನೇ ನಮ್ಮ ರಾಜಕಾರಣಿಗಳು ಮಾಡುತ್ತಿಲ್ಲ.

 

ಬಜೆಟ್ ಯಾರು ಮಂಡನೆ ಮಾಡಬೇಕು ಎನ್ನುವುದನ್ನೇ ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಂಡು ಗೊಂದಲ ಮೂಡಿಸಿದರು. ಇನ್ನಾದರೂ ಬಿಜೆಪಿ ಮುಖಂಡರು ಭಿನ್ನಾಭಿಪ್ರಾಯಗಳನ್ನು ಮರೆತು ರಾಜ್ಯದ ಜನರ ಸಮಸ್ಯೆಗಳ ಪರಿಹಾರಕ್ಕೆ ಗಮನ ಕೊಡಬೇಕು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.