ಶುಕ್ರವಾರ, ಮೇ 7, 2021
21 °C

ಪ್ರಜಾವಾಣಿ ಕಚೇರಿಯಲ್ಲಿ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಇಲ್ಲಿನ `ಪ್ರಜಾವಾಣಿ~ ಪತ್ರಿಕಾ ಕಚೇರಿಯ ಬಾಗಿಲು ಕೀಲಿ ಮುರಿದು ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತು ಗಳನ್ನು ಕಳ್ಳತನ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.ಕಚೇರಿಯ ಬಾಗಿಲ ಕೀಲಿಯನ್ನು ಕಲ್ಲಿನಿಂದ ಜಜ್ಜಿ ಲ್ಯಾಪ್‌ಟಾಪ್, ಯುಪಿಎಸ್, ಬ್ಯಾಟರಿ ಸೇರಿದಂತೆ ಇತರೆ ವಸ್ತುಗಳನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ. ಅಲ್ಲದೆ, ಕಚೇರಿಯಲ್ಲಿದ್ದ ಎರಡು ಕಂಪ್ಯೂಟರ್‌ಗಳಿಗೂ ಬೆಂಕಿ ಹಚ್ಚಿ ಹಾನಿ ಮಾಡಿದ್ದಾರೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ ನಾಯಕ, ಡಿವೈಎಸ್‌ಪಿ ಸುರೇಶ ಮಸೂತಿ, ಸಿಪಿಐ ವಿಜಯ ಬಿರಾದಾರ, ಬೆರಳಚ್ಚು ತಂಡ ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿತು.ಈ ಕುರಿತು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.ಭೇಟಿ: `ಪ್ರಜಾವಾಣಿ~ ಪತ್ರಿಕಾ ಕಚೇರಿಯಲ್ಲಿ ಕಳ್ಳತನ ನಡೆದಿರುವ ವಿಷಯ ತಿಳಿದು ಮಾಜಿ ಸಚಿವ ಎಚ್.ಕೆ. ಪಾಟೀಲ ಹಾಗೂ ಇತರ ಪಕ್ಷದ ಮುಖಂಡರು ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.