ಗುರುವಾರ , ಏಪ್ರಿಲ್ 22, 2021
29 °C

ಪ್ರಣವ್ ಪ್ರಮಾಣಕ್ಕೆ ಮುಹೂರ್ತ ನಿಗದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಪ್ರಣವ್ ಮುಖರ್ಜಿ ಅವರು ಸಂಸತ್ತಿನ ಸೆಂಟ್ರಲ್ ಸಭಾಂಗಣದಲ್ಲಿ ಬುಧವಾರ ನಡೆಯುವ ವಿಶೇಷ ಸಮಾರಂಭದಲ್ಲಿ ಭಾರತದ 13ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ಅವರು ಮುಖರ್ಜಿ ಅವರಿಗೆ ಬೆಳಿಗ್ಗೆ 11.30ಕ್ಕೆ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್, ಲೋಕಸಭಾ ಅಧ್ಯಕ್ಷರಾದ ಮೀರಾ ಕುಮಾರ್, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಕೇಂದ್ರ ಸಚಿವರು, ರಾಜ್ಯಪಾಲರುಗಳು, ಮುಖ್ಯಮಂತ್ರಿಗಳು ಮತ್ತು ಇತರ ಹಲವಾರು ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಬೋಧಿಸುವರು ಎಂದು ಗೃಹ ಸಚಿವಾಲಯದ ಪ್ರಕಟಣೆಯೊಂದು ಸೋಮವಾರ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.