ಮಂಗಳವಾರ, ಮೇ 11, 2021
27 °C

ಪ್ರಣವ್ ಭೇಟಿ ಮಾಡಿದ ಆರ್‌ಬಿಐ ಗವರ್ನರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ವಾರ್ಷಿಕ ಸಾಲ ನೀತಿಯ ಪರಾಮರ್ಶೆ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಗವರ್ನರ್ ಡಿ.ಸುಬ್ಬರಾವ್ ಅವರು ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರನ್ನು ಶನಿವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.ಪ್ರಧಾನಿ ಮತ್ತು ಹಣಕಾಸು ಸಚಿವರ ಜತೆಗಿನ ಮಾತುಕತೆ ವೇಳೆ ಸುಬ್ಬರಾವ್ ಅವರು ದೇಶದ ಸದ್ಯದ ಆರ್ಥಿಕ ಸ್ಥಿತಿಗತಿ ಹಾಗೂ ಪ್ರಗತಿಗತಿ ಹಿನ್ನಡೆಯನ್ನು ತಡೆಯುವ ಬಗ್ಗೆ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಆರ್‌ಬಿಐ ವಾರ್ಷಿಕ ಆರ್ಥಿಕ ನೀತಿಯ ಪರಾಮರ್ಶೆ ವರದಿಯನ್ನು ಇದೇ 17ರಂದು ಮಂಡಿಸಲಿದ್ದು, ಅದಕ್ಕೂ ಮುನ್ನ ಹಣಕಾಸು ಸಚಿವರ ಜತೆ ಚರ್ಚೆ ನಡೆಸುವುದು ವಾಡಿಕೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.