ಮಂಗಳವಾರ, ಜೂನ್ 22, 2021
24 °C
ಆರ್‌ಎಸ್‌ಎಸ್‌ಗೆ ವಿಶ್ವಾಸ

ಪ್ರಣಾಳಿಕೆಯಲ್ಲಿ ರಾಮಮಂದಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತ ವಿಷಯವನ್ನು ಬಿಜೆಪಿ ಈ ಸಲದ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುವ ನಿರೀಕ್ಷೆ ಇದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಜಂಟಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ತಿಳಿಸಿದರು.ಬೆಂಗಳೂರಿನ ಥಣಿಸಂದ್ರದಲ್ಲಿ ಶುಕ್ರವಾರ ಪ್ರಾರಂಭವಾದ ಮೂರು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ಉದ್ಘಾಟನಾ ಕಾರ್ಯಕ್ರಮದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿಗೆ ಅಗತ್ಯ ಸಮಯದಲ್ಲಿ ಸಂಘ ಸಲಹೆಗಳನ್ನು ನೀಡುತ್ತಲೇ ಬಂದಿದೆ. ಪ್ರಣಾಳಿಕೆಯನ್ನು ತಯಾರಿಸುವ ನಿರ್ಧಾರ ಪಕ್ಷಕ್ಕೆ ಬಿಟ್ಟದ್ದು. ಆರ್ಥಿಕ ನೀತಿ, ದೇಶದ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಲಾಗಿದೆ ಎಂದರು.ಬಿಜೆಪಿ, ತನ್ನ ಪ್ರತಿನಿಧಿಗಳನ್ನು ಈ ಸಭೆಗೆ ಕಳುಹಿಸಿಕೊಟ್ಟಿದೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೆಲವು ವಿಷಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸಂಘದ ಸ್ವಯಂ ಸೇವಕರಾಗಿದ್ದವರು. ಅವರ ಬಗ್ಗೆ ಹೆಮ್ಮೆ ಇದೆ. ಆದರೆ ಚುನಾವಣಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಷಯದಲ್ಲಿ ಸಂಘದ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದರು.ಅಲ್ಪಸಂಖ್ಯಾತರ ಹೆಸರಿನಲ್ಲಿ ರಾಜಕೀಯ ಪಕ್ಷಗಳು ಸಮಾಜವನ್ನು ಒಡೆಯುತ್ತಿವೆ. ಕಳೆದ 10 ವರ್ಷಗಳಲ್ಲಿ ಯುಪಿಎ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತರ ಒಲೈಕೆಗೆ ಹಲವು ರೀತಿಯಲ್ಲಿ ಪ್ರಯತ್ನಿಸಿದೆ. ಇದರಿಂದಾಗಿ ದೇಶದ ಆತ್ಮಗೌರವಕ್ಕೆ ಧಕ್ಕೆಯಾಗಿದೆ. ಇಂತಹ ಹಲವು ವಿಷಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು. ಸದ್ಯಕ್ಕೆ ಸಂಘವು ಈಶಾನ್ಯ ರಾಜ್ಯಗಳತ್ತ ಹೆಚ್ಚಿನ ಗಮನಹರಿಸಲಿದೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.