ಮಂಗಳವಾರ, ಮಾರ್ಚ್ 9, 2021
30 °C

ಪ್ರತಿಕೂಲ ಹವಾಮಾನ : ರಕ್ಷಣಾ ತಂಡಕ್ಕೆ ತಲುಪದ ಆಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರತಿಕೂಲ ಹವಾಮಾನ : ರಕ್ಷಣಾ ತಂಡಕ್ಕೆ ತಲುಪದ ಆಹಾರ

ಡೆಹ್ರಾಡೂನ್/ಲಖನೌ (ಐಎಎನ್‌ಎಸ್) : ಉತ್ತರಾಖಂಡದ ಕೇದಾರನಾಥದಲ್ಲಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಕ್ಕೆ (ಎನ್‌ಡಿಆರ್‌ಎಫ್) ಪ್ರತಿಕೂಲ ಹವಾಮಾನದಿಂದಾಗಿ ಕಳೆದ ಐದು ದಿನಗಳಿಂದ  ಆಹಾರ ಮತ್ತು ಔಷಧಗಳ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.ರಾಜ್ಯದಲ್ಲಿ  ಭಾರೀ ಮಳೆಯಿಂದಾಗಿ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದ ಜನರ ರಕ್ಷಣೆಗೆಂದು ಬರುವಾಗ ಎನ್‌ಡಿಆರ್‌ಎಫ್ ತಂಡವು ಕೇವಲ ಒಂದು ದಿನಕ್ಕಾಗುವಷ್ಟು ಮಾತ್ರ ಆಹಾರವನ್ನು ಹೊತ್ತು ತಂದಿತ್ತು. ಅಲ್ಲದೆ ಕಳೆದ ಕೆಲವು ದಿನಗಳಿಂದ ಕೆಲವು ಸದಸ್ಯರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದ ಅಧಿಕಾರಿ ಮೂಲಗಳು ತಿಳಿಸಿವೆಸತತವಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ತಂಡಕ್ಕೆ ಅಗತ್ಯವಾದ ವಸ್ತುಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ನಡೆಸಿದ ಎಲ್ಲಾ ಪ್ರಯತ್ನಗಳೂ ವಿಫಲಗೊಂಡಿದೆ ಎಂದು ಮೂಲಗಳು ತಿಳಿಸಿವೆ.

'40 ಮಂದಿ ಸದಸ್ಯರು ಅತಿಸಾರ ಮತ್ತು ಹೊಟ್ಟೆನೋವಿನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿಯನ್ನು ಎನ್‌ಡಿಆರ್‌ಎಫ್ ತಂಡದಲ್ಲಿರುವ ವೈದ್ಯರು ತಿಳಿಸಿದ್ದಾರೆ' ಎಂದು ಗುಪ್ತಕಾಶಿಯಲ್ಲಿರುವ ಆರೋಗ್ಯ ಇಲಾಖೆಯ ನೋಡಲ್ ಅಧಿಕಾರಿ ಕೆ. ಕೆ. ಕಾಮತ್ ತಿಳಿಸಿದರು.'ಆಹಾರ ಸಾಮಗ್ರಿ, ಔಷಧಗಳು ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನೊಳಗೊಂಡ ಎರಡು ವಿಶೇಷ ವಿಮಾನಗಳು ಹವಾಮಾನ ವೈಪರಿತ್ಯದಿಂದಾಗಿ ಹಾರಾಟ ನಡೆಸಲು ಸಾಧ್ಯವಾಗಿಲ್ಲ' ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಶ್ ಕುಮಾರ್ ಮಾಹಿತಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.