ಪ್ರತಿಕ್ರಿಯೆಗೆ ರೆಡ್ಡಿ ನಕಾರ

7

ಪ್ರತಿಕ್ರಿಯೆಗೆ ರೆಡ್ಡಿ ನಕಾರ

Published:
Updated:

ಧಾರವಾಡ: ರಾಜ್ಯ ಸರ್ಕಾರ ಅದಿರು ರಫ್ತು ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ತೆಗೆದುಹಾಕಿದ ಸುಪ್ರೀಂ ಕೋರ್ಟ್ ತೀರ್ಪಿನ ವಿಷಯವಾಗಿ ಪ್ರತಿಕ್ರಿಯೆ ನೀಡಲು ಪ್ರವಾಸೋದ್ಯಮ ಖಾತೆ ಸಚಿವ ಜನಾರ್ದನ ರೆಡ್ಡಿ ಗುರುವಾರ ಇಲ್ಲಿ ನಿರಾಕರಿಸಿದರು.

ವರದಿಗಾರರ ಜೊತೆ ಮಾತನಾಡಿದ ಅವರು,ಸುಪ್ರೀಂ ಕೋರ್ಟ್ ತೀರ್ಪಿನ ವಿವರಗಳನ್ನು ತಿಳಿದುಕೊಳ್ಳದ ಹೊರತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ‘ಭೂಹಗರಣಕ್ಕೆ ಸಂಬಂಧಿಸಿದ ಪ್ರಕರಣ ಕೋರ್ಟ್ ಮುಂದೆ ಇದ್ದರೂ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿರುವ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಸರ್ಕಾರಕ್ಕೆ ಇರುಸು-ಮುರುಸು ಉಂಟು ಮಾಡುತ್ತಿದ್ದಾರೆ ಎಂದು ದೂರಿದರು.

ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೂ ಹಗರಣದ ಸಮಗ್ರ ತನಿಖೆಗೆ ಆದೇಶ ನೀಡಿದ್ದಾರೆ. ಹೀಗಿದ್ದೂ ಮತ್ತೊಂದು ತನಿಖೆಗೆ ಅವಕಾಶ ನೀಡಲು ಹೊರಟಿರುವ ರಾಜ್ಯಪಾಲರ ಕ್ರಮದಲ್ಲಿ ಯಾವುದೇ ಹುರುಳಿಲ್ಲ. ಮತ್ತೊಂದು ತನಿಖೆಯ ಅಗತ್ಯವೂ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry