ಪ್ರತಿಭಟನೆ ಹಿಂಪಡೆದ ಭೂಮಾಪಕರು
ಬೆಂಗಳೂರು: ಕಂದಾಯ ಇಲಾಖೆಯ ಭೂ ಮಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕೆಂದು ಒತ್ತಾಯಿಸಿ ಅಭ್ಯರ್ಥಿಗಳು ನಗರದ ಬನಪ್ಪ ಉದ್ಯಾನದಲ್ಲಿ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಶುಕ್ರವಾರ ವಾಪಸ್ ಪಡೆದಿದ್ದಾರೆ.
`ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಶೀಘ್ರದಲ್ಲಿ ನೇಮಕಾತಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದೇವೆ' ಎಂದು ಪ್ರತಿಭಟನಾ ನಿರತ ಶಿವನಗೌಡ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.