ಮಂಗಳವಾರ, ಮೇ 17, 2022
25 °C

ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ರಾಜ್ಯದಲ್ಲಿ 43 ಹೊಸ ತಾಲ್ಲೂಕುಗಳ ರಚನೆಗೆ ಕಾಂಗ್ರೆಸ್ ಸರ್ಕಾರ ಹಿನ್ನಡೆ ಉಂಟುಮಾಡುತ್ತಿದೆ ಎಂದು ಆರೋಪಿಸಿ ಬ್ರಹ್ಮಾವರ ತಾಲ್ಲೂಕು ರಚನಾ ಹೋರಾಟ ಸಮಿತಿ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ್ ಜೋಶಿ, `ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ತಾಲ್ಲೂಕುಗಳ ರಚನೆ ಸದ್ಯಕ್ಕಿಲ್ಲ ಎಂದು ಹೇಳಿದ್ದಾರೆ. ಇದರಿಂದ ಹೊಸ ತಾಲ್ಲೂಕುಗಳ ರಚನೆಯ ಕನಸಿಗೆ ತಣ್ಣೀರೆರೆಚಿದಂತಾಗಿದೆ' ಎಂದರು.ಬ್ರಹ್ಮಾವರ ತಾಲ್ಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಸತೀಶ್ ಪುಜಾರಿ, ಜಯ ಕರ್ನಾಟಕ ಸಂಘಟನೆಯ ಬಾರ್ಕೂರು ವಲಯದ ಉಪಾಧ್ಯಕ್ಷ ರವಿಕುಮಾರ ಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.