ಪ್ರತಿಭಾವಂತರನ್ನು ಗುರುತಿಸಿ: ಅನಂತಕುಮಾರ್
ಬೆಂಗಳೂರು: ಸಂಘ- ಸಂಸ್ಥೆಗಳು ವಿವಿಧ ಕ್ಷೇತ್ರಗಳ ಪ್ರತಿಭಾವಂತರನ್ನು ಗುರುತಿಸುವ ಮೂಲಕ ಸಮಾಜದ ಏಳಿಗೆಗೆ ಕೊಡುಗೆ ನೀಡಬೇಕು ಎಂದು ಸಂಸದ ಅನಂತಕುಮಾರ್ ಹೇಳಿದರು.
ಇಟ್ಟಮಡು ಬಡಾವಣೆ ಶ್ರೀ ವಿಪ್ರ ಸ್ನೇಹ ಸಭಾ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮುದಾಯದ 50 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಮಾಜದ ವಿವಿಧ ಸಮುದಾಯಗಳಿಗೆ ಸೇರಿದ 300 ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಿಸಲಾಯಿತು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪ್ರಧಾನ ಕಾರ್ಯದರ್ಶಿ ದಿವಾಕರ ಡೋಂಗ್ರೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.