ಧಾರವಾಡ: ‘ಪ್ರತಿಭಾವಂತ ವಿದ್ಯಾರ್ಥಿ ಗಳನ್ನು ಪ್ರೋತ್ಸಾಹಿಸುವುದರ ಜೊತೆಗೆ ಬಡಕುಟುಂಬದ ಹಿನ್ನೆಲೆಯುಳ್ಳ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚವನ್ನು ಭರಿಸುವ ಕೆಲಸ ಎಲ್ಲಾ ಸಮಾಜದಿಂದ ಆಗಬೇಕಿದೆ’ ಎಂದು ಡಾ. ಜಯಶ್ರೀ ಕೊಲೊಳಗಿ ಅಭಿಪ್ರಾಯಪಟ್ಟರು.

ನಗರದ ಬಣಜಿಗ ಭವನದಲ್ಲಿ ಭಾನುವಾರ ನಡೆದ ತಾಲ್ಲೂಕು ಘಟಕದ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಶಿಕ್ಷಣ ಪಡೆಯಬೇಕು ಎಂಬ ಹಂಬಲ ಮಕ್ಕಳಲ್ಲಿ ಇರುತ್ತದೆ. ಆದರೆ ಎಲ್ಲಾ ಮಕ್ಕಳಲ್ಲೂ ಪ್ರತಿಭೆ ಇರುವುದಿಲ್ಲ ಎಂದು ಭಾವಿಸುವುದು ತಪ್ಪು. ವಿದ್ಯಾರ್ಥಿಗಳು ಅಭಿರುಚಿ ಹಾಗೂ ಆಸಕ್ತಿಗೆ ತಕ್ಕಂತೆ ವಿದ್ಯಾಭ್ಯಾಸ ನೀಡುವ ಕೆಲಸ ಪಾಲಕ ರಿಂದ ಆಗಬೇಕು. ಹೆಚ್ಚು ಅಂಕಗಳಿಸುವ ನಿಟ್ಟಿನಲ್ಲಿ ಮಾತ್ರ ಮಕ್ಕಳನ್ನು ಬೆಳೆಸುವ ಬದಲಾಗಿ ಸಮಾಜಮುಖಿಯಾಗಿ ಬೆಳೆಸುವುದು ಸೂಕ್ತ’ ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ವಿವಿ ಪ್ರಾಧ್ಯಾಪಕ ಡಾ.ಎಂ.ಎ.ಜಾಲಿಹಾಳ ಮಾತನಾಡಿ, ‘ಮಕ್ಕಳಿಗೆ ಇಂದು ಸಾತ್ವಿಕ ಆಹಾರದ ಬದಲಾಗಿ ಫಾಸ್ಟ್ಫುಡ್ ನೀಡುತ್ತಿರುವವರ ಸಂಖ್ಯೆ ದೊಡ್ಡದಿದೆ. ಇದರಿಂದ ಮಕ್ಕಳಲ್ಲಿ ಸ್ಮರಣ ಶಕ್ತಿ ಕುಂಠಿತವಾಗುತ್ತಿರುವುದರಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಸೊಪ್ಪು, ತರಕಾರಿ, ಬೇಳೆಕಾಳು, ಹಣ್ಣು ಹೀಗೆ ಸಸ್ಯಹಾರಿ ಆಹಾರ ನೀಡಿದಾಗ ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ’ ಎಂದು ಅವರು ಹೇಳಿದರು.

ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರುದ್ರಣ್ಣ ಹೊಸಕೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಂತವೀರ ಬೆಟಗೇರಿ ಪ್ರಾಸ್ತಾವಿಕ ಮಾತನಾಡಿದರು. ಮುರಗೆಪ್ಪ ತುರಮರಿ, ಅನೀಲ ಅಂಗಡಿ, ಬಸವರಾಜ ಕಪಲಿ, ಸುಮಾ ಚೌಶೆಟ್ಟಿ, ಸುಮಂಗಲಾ ಕಂಠಿ, ಎಂ.ವಿ.ಅಮರಶೆಟ್ಟಿ, ಚನಬಸಪ್ಪ ಕಗ್ಗಣ್ಣವರ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮುಖ್ಯಾಂಶಗಳು
* ಬಡಕುಟುಂಬದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ
* ಶಿಕ್ಷಣ ಪಡೆಯುವ ಹಂಬಲ ಮಕ್ಕಳಲ್ಲಿರುತ್ತದೆ
* ಪಾಲಕರು ಆಸಕ್ತಿ, ಅಭಿರುಚಿ ಗುರುತಿಸಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.