ಬುಧವಾರ, ಜೂನ್ 16, 2021
23 °C

ಪ್ರತಿಭಾವಂತ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರತಿಭಾವಂತ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ

ಜಮಖಂಡಿ: ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕ ಎನಿಸಿರುವ ನಾಟಕಗಳಿಗೆ ಜೀವಕಳೆ ತುಂಬಿಕೊಡುವ ಪ್ರತಿಭಾವಂತ ಕಲಾವಿದರನ್ನು ಸರ್ಕಾರ ಮತ್ತು ಸಮಾಜ ಪ್ರೋತ್ಸಾಹಿಸಬೇಕಾದ  ಅಗತ್ಯವಿದೆ ಎಂದು ಕೇಂದ್ರ ಮಾಜಿ ಸಚಿವ ಸಿದ್ದು ನ್ಯಾಮಗೌಡ ಹೇಳಿದರು.ಸ್ಥಳೀಯ ಬಸವ ಸಮಿತಿ ಹಾಗೂ ಬಸವ ಕೇಂದ್ರದ ಸಹಯೋಗದಲ್ಲಿ ಇಲ್ಲಿನ ಬಸವ ಭವನದಲ್ಲಿ ಚಿತ್ರದುರ್ಗದ ಮುರುಘಾಮಠದ ಜಮುರಾ ಕಲಾಲೋಕ ತಂಡದ ಕಲಾವಿದರಿಂದ ಪ್ರದರ್ಶನಗೊಂಡ ಎಡೆಯೂರ  ಸಿದ್ಧಲಿಂಗೇಶ್ವರ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಧಾನ ಪರಿಷತ್ತು ಸದಸ್ಯ ಜಿ.ಎಸ್. ನ್ಯಾಮಗೌಡ ಮುಖ್ಯ ಅತಿಥಿಯಾಗಿ ಮಾತನಾಡಿದರು. ಹಿರಿಯ ಸಾಹಿತಿ ಡಾ. ಸಂಗಮೇಶ ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಲೆಕ್ಕಾಧಿಕಾರಿ ಬಸವರಾಜ ಸಿಂಧೂರ, ಕಲಾಲೋಕದ ವ್ಯವಸ್ಥಾಪಕ ಎಂ.ಟಿ.ರುದ್ರಮೂರ್ತಿ, ಭರತ ಕುಲಕರ್ಣಿ ವೇದಿಕೆಯಲ್ಲಿದ್ದರು.ಸರಸ್ವತಿ ಸಬರದ ಪ್ರಾರ್ಥನೆ ಗೀತೆ ಹಾಡಿದರು. ಬಸವ ಸಮಿತಿ ಅಧ್ಯಕ್ಷ ಕಾಡು ಮಾಳಿ ಸ್ವಾಗತಿಸಿದರು. ಬಸವ ಕೇಂದ್ರ ಅಧ್ಯಕ್ಷ ರವಿ ಯಡಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲೇಶಪ್ಪ ಗೆದ್ದೆಪ್ಪನವರ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.