ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ

Published:
Updated:

ಗೋಣಿಕೊಪ್ಪಲು:  ಪೊನ್ನಂಪೇಟೆ ನಾಗರಿಕ ಸೇವಾ ಸಮಿತಿ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸೋಮವಾರ ಪ್ರೋತ್ಸಾಹ ಧನ ವಿತರಿಸಲಾಯಿತು.ಸೇವಾ ಸಮಿತಿ ಅಧ್ಯಕ್ಷ ಪಿ.ಬಿ. ಪೂಣಚ್ಚ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಆರ್ಥಿಕವಾಗಿ ಹಿಂದುಳಿದು ಅಧ್ಯಯನದಲ್ಲಿ ಮುಂದಿರುವ ಬಡ 6 ಮಂದಿ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡಿದರು. ಪೊನ್ನಂಪೇಟೆ ಪದವಿ ಪೂರ್ವ ಕಾಲೇಜಿನ ದ್ವಿತೀಯ  ಪಿಯುಸಿ ವಿದ್ಯಾರ್ಥಿಗಳಾದ ವಿ.ಆರ್.ಶಾಲಿನಿ, ಎನ್.ಡಿ.ವೀಣಾ ಅವರಿಗೆ ತಲಾ 1ಸಾವಿರ, 10 ನೇ ತರಗತಿ ವಿದ್ಯಾರ್ಥಿಗಳಾದ  ಪಿ.ಎಸ್.ಸುಜಿ, ಪಿ.ಎಸ್.ಗೀತಾ ಅವರಿಗೆ ತಲಾ ರೂ. 750, ಸರ್ಕಾರಿ ಹಿರಿಯ ಪ್ರಾಥಮಿಕ  ಶಾಲೆಯ ಬಿ.ಬಿ.ದೇಚಮ್ಮ, ಜಿ.ನೇತ್ರ ಅವರಿಗೆ ತಲಾ ರೂ. 500 ಧನಸಹಾಯ ನೀಡಲಾಯಿತು.ದಾನಿಗಳು ಹಾಗೂ ಸಂಘದ ಪದಾಧಿಕಾರಿಗಳಾದ ಸಿ.ಕೆ.ಸೋಮಯ್ಯ, ಎಂ.ಪಿ.ಅಪ್ಪಚ್ಚು, ಪಿ.ಎಂ.ಗಣಪತಿ, ಪಿ.ಪಿ.ಪ್ರಭಾಕರ, ಪಿ.ಬಿ. ಪೂಣಚ್ಚ ತಲಾ ರೂ.1ಸಾವಿರ, ಕೆ.ಕೆ.ಸೋಮಯ್ಯ, ವಿಮಲಾ ಬೋಪಯ್ಯ, ತಲಾ ರೂ.500 ಪ್ರೋತ್ಸಾಹ ಧನ ನೀಡಿದ್ದರು. ಸಂಘದ  ಕಾರ್ಯದರ್ಶಿ ಪ್ರಭಾಕರ,ಸಿ.ಕೆ. ಸೋಮಯ್ಯ, ಎಂ.ಪಿ.ಗಣಪತಿ, ಎಂ.ಪಿ.ಅಪ್ಪಚ್ಚು, ಚಿಮ್ಮಣಮಾಡ ವಾಸು ಹಾಜರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry