ಪ್ರತಿಭಾ ಪುರಸ್ಕಾರ
ಬೆಂಗಳೂರು: ರಾಜಾಜಿನಗರದ ಮೈತ್ರಿ ಸಂಸ್ಕೃತ- ಸಂಸ್ಕೃತಿ ಪ್ರತಿಷ್ಠಾನದ ಆಶ್ರಯದಲ್ಲಿ `ಸ್ವಾತಂತ್ರ್ಯ ಒಂದು ಸಿಂಹಾವಲೋಕನ~ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗೀತನಮನ ಮಲ್ಲೇಶ್ವರದ ರೋಟರಿ ಭವನದಲ್ಲಿ ಬುಧವಾರ ನಡೆಯಿತು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಸ್ಕೃತ ಭಾಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 20 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಗರದ ಸರ್ಕಾರಿ ಶಾಲೆಗಳ 500 ವಿದ್ಯಾರ್ಥಿಗಳಿಗೆ ತಲಾ 200 ರೂಪಾಯಿ ಮೌಲ್ಯದ ಪುಸ್ತಕಗಳನ್ನು ವಿತರಿಸಲಾಯಿತು. ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಂಬಂಧಿಸಿದ ಛಾಯಾಚಿತ್ರ ಹಾಗೂ ಕಲಾಕೃತಿಗಳ ಪ್ರದರ್ಶನ `ಪ್ರದರ್ಶಿನಿ~ ಗಮನ ಸೆಳೆಯಿತು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಪ್ರಸ್ತುತಪಡಿಸಿದರು.
ಮಲ್ಲೇಶ್ವರ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಇಸ್ಕಾನ್ ಕಲಾಕ್ಷೇತ್ರದ ನಿರ್ದೇಶಕ ತಿರುದಾಸ, ಮೈತ್ರಿ ಸಂಸ್ಕೃತ-ಸಂಸ್ಕೃತಿ ಪ್ರತಿಷ್ಠಾನದ ಸಂಸ್ಥಾಪಕ ಗಣಪತಿ ಹೆಗಡೆ ಮತ್ತಿತರರು ಹಾಜರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.