ಪ್ರತಿಭಾ ಪ್ರದರ್ಶನಕ್ಕೆ ಸಲಹೆ

7

ಪ್ರತಿಭಾ ಪ್ರದರ್ಶನಕ್ಕೆ ಸಲಹೆ

Published:
Updated:

ಕೆಂಗೇರಿ: ಮಕ್ಕಳು ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮುಂದಾಗಬೇಕು ಎಂದು ಶಾಂತಿಧಾಮ ಶಾಲೆಯ ಟ್ರಸ್ಟಿ ಜಿ.ಧನಂಜಯ್ಯ ಹೇಳಿದರು.ಸುಂಕದಕಟ್ಟೆ ಮುಖ್ಯರಸ್ತೆಯಲ್ಲಿರುವ ಶಾಂತಿಧಾಮ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದ ಅವರು ಮಾತನಾಡಿ, ವಿದ್ಯಾರ್ಥಿಗಳು ಕಲಿಕೆ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಇದರಿಂದ ವ್ಯಕ್ತಿತ್ವ ವಿಕಸನವಾಗಲಿದೆ ಎಂದು ತಿಳಿಸಿದರು.ಶಾಲೆಯ ಸಂಸ್ಥಾಪಕ ಅಧ್ಯಕ್ಷ ಗಂಗಾಧರಯ್ಯ, ಟ್ರಸ್ಟಿ ಪರಮೇಶ್, ಮುಖ್ಯ ಶಿಕ್ಷಕಿ ಶ್ರೀದೇವಿ ಇತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry