ಗುರುವಾರ , ಜೂನ್ 24, 2021
21 °C

ಪ್ರತಿಭೆಗಳ ಗುರುತಿಸಲು ಸಾಂಸ್ಕೃತಿಕ ಕ್ಷೇತ್ರ ಪೂರಕ: ಎ.ಕೃಷ್ಣಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜಪುರ: ‘ಬೆಂಗಳೂರು ವಿಶ್ವ­ವಿದ್ಯಾ­ಲಯ ಪ್ರತಿಯೊಂದು ಕಾಲೇಜಿ­ನಲ್ಲೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಸೂಚಿಸಿದೆ. ಪ್ರತಿಭೆಗಳ ಅನಾ­ವರಣಕ್ಕೆ   ಸಾಂಸ್ಕೃತಿಕ ಚಟುವಟಿಕೆಗಳು ಪೂರಕವಾಗಿದ್ದು ವಿದ್ಯಾರ್ಥಿಗಳು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎ.ಕೃಷ್ಣಪ್ಪ ಸಲಹೆ ನೀಡಿದರು.ಎಸ್ಇಎ ಶಿಕ್ಷಣ ಸಂಸ್ಥೆಯ ಆವರಣ­ದಲ್ಲಿ ಏರ್ಪಡಿಸಿದ್ದ ‘ಸಾಂಸ್ಕೃತಿಕ ಉತ್ಸವ –2014’ ಕಾರ್ಯಕ್ರಮದಲ್ಲಿ ಮಾತನಾಡಿ,  ಜಾತಿ, ಭಾಷೆ, ಧರ್ಮಗಳ ಚೌಕಟ್ಟನ್ನು ಮೀರಿರುವುದು ಸಾಂಸ್ಕೃತಿಕ ಕ್ಷೇತ್ರ.   ವಿದ್ಯಾರ್ಥಿಗಳಲ್ಲಿ ಪರಸ್ಪರ ಅರಿವು ಮೂಡಿಸುವ ನಿಟ್ಟಿನಲ್ಲಿ ಪಠ್ಯೇತರ ಚಟುವಟಿಕೆಗಳು ಪರಿಣಾಮಕಾರಿ ಪಾತ್ರ ವಹಿಸುತ್ತವೆ.ಮುಂದಿನ ದಿನಗಳಲ್ಲಿ ಅಂತರ ಕಾಲೇಜು ಮಟ್ಟದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಅಳವಡಿಕೆಗೆ ಒತ್ತು ನೀಡಲಾಗುವುದು ಎಂದು ಅವರು ತಿಳಿಸಿದರು. ಪ್ರಾಂಶುಪಾಲ ಮುತ್ತೇಗೌಡ, ಪತ್ರಿಕೋದ್ಯಮ ಉಪನ್ಯಾಸಕಿ ರಮ್ಯ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.