ಪ್ರತಿಭೆಗೆ ನಗರ, ಗ್ರಾಮೀಣ ವ್ಯತ್ಯಾಸವಿಲ್ಲ

7

ಪ್ರತಿಭೆಗೆ ನಗರ, ಗ್ರಾಮೀಣ ವ್ಯತ್ಯಾಸವಿಲ್ಲ

Published:
Updated:

ಹಿರಿಯೂರು: ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ತಾವು ನಗರ ಪ್ರದೇಶದವರಿಗಿಂತ ಕಡಿಮೆ ಎಂಬ ಕೀಳರಿಮೆಯಿಂದ ಹೊರಬಂದು ಉತ್ತಮ ಸಾಧನೆ ಮಾಡಬೇಕು ಎಂದು ವಾಣಿವಿಲಾಸ ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ ಕರೆ ನೀಡಿದರು.ತಾಲ್ಲೂಕಿನ ಆರನಕಟ್ಟೆ ಗ್ರಾಮದ ಸರ್ಕಾರಿ ಪಿಯು ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕ್ರೀಡಾ, ಸಾಂಸ್ಕೃತಿಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡುವ ಮೂಲಕ ಕಾಲೇಜಿಗೆ, ಪೋಷಕರಿಗೆ ಒಳ್ಳೆಯ ಹೆಸರು ತರಬೇಕು ಎಂದು ಕಾರ್ಯಕ್ರಮ ಉದ್ಘಾಟಿಸಿದ ತಾ.ಪಂ. ಸದಸ್ಯ ಎಚ್.ವಿ. ವೆಂಕಟೇಶ್ ಕರೆ ನೀಡಿದರು.ಪಿಯು ಶಿಕ್ಷಣ ವಿದ್ಯಾರ್ಥಿ ಬದುಕಿನಲ್ಲಿ ಅತ್ಯಂತ ಪ್ರಮುಖ ಘಟ್ಟವಾಗಿದ್ದು, ಇಲ್ಲಿ ಉತ್ತಮ ಅಂಕ ಗಳಿಸಿದರೆ ಭವಿಷ್ಯದ ಬದುಕಿಗೆ ತುಂಬಾ ಸಹಕಾರಿಯಾಗುತ್ತದೆ. ಈ ಬಗ್ಗೆ ವಿದ್ಯಾರ್ಥಿಗಳು ತಿಳಿದಿರಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಕೆ.ಆರ್. ವೀರಭದ್ರಯ್ಯ ತಿಳಿಸಿದರು.ಪ್ರತಿಭೆಗೆ ಗ್ರಾಮೀಣ ನಗರ, ಗ್ರಾಮೀಣ ಎಂಬ ವ್ಯತ್ಯಾಸ ಇರುವುದಿಲ್ಲ. ಭವಿಷ್ಯದ ಕನಸು ರೂಪಿಸಿಕೊಳ್ಳುವ ಶಕ್ತಿ ಎಲ್ಲರಲ್ಲೂ ಇರುತ್ತದೆ ಎಂದು ಸಮಾರೋಪ ಭಾಷಣ ಮಾಡಿದ ಜೆಜಿ ಹಳ್ಳಿ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ಚಂದ್ರಶೇಖರಪ್ಪ ಹೇಳಿದರು.ಲೀಲಾವತಿ, ಎಚ್.ಸಿ. ಸತೀಶ್‌ಕುಮಾರ್, ರಮೇಶ್, ಮಾರುತಿ ಹಾಜರಿದ್ದರು. ಅನಿಲ್‌ಕುಮಾರ್ ಸ್ವಾಗತಿಸಿದರು. ಶ್ರೀನಿವಾಸ್ ವಂದಿಸಿದರು, ಡಿ. ಬೊಮ್ಮಲಿಂಗಪ್ಪ ಕಾರ್ಯಕ್ರಮ ನಿರೂಪಿಸಿದರು.ವಾರ್ಷಿಕೋತ್ಸವ: ನಗರದ ನಾಕೋಡ ಭೈರವ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಡಿವೈಎಸ್ಪಿ ಎನ್. ರುದ್ರಮುನಿ ಉದ್ಘಾಟಿಸಿದರು.

ಸಂಸ್ಥೆಯ ಅಧ್ಯಕ್ಷ ಧನ್‌ರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಎಚ್.ಎಸ್. ಸುಂದರರಾಜ್, ಫಕೃದ್ದೀನ್, ಜಿ. ಹಿತೇಶ್‌ಕುಮಾರ್ ಹಾಜರಿದ್ದರು.ಸುಂದರರಾಜ್ ಸ್ವಾಗತಿಸಿದರು. ಡಿ.ಜಿ. ಶ್ರೀನಿವಾಸ್ ವಂದಿಸಿದರು. ಪರಮೇಶ್ವರಪ್ಪ ಕಾರ್ಯಕ್ರಮ ನಿರೂಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry