ಬುಧವಾರ, ಜನವರಿ 29, 2020
30 °C

ಪ್ರತಿಭೆಗೆ ಪ್ರತಿಭಾ ಕಾರಂಜಿ ವೇದಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಡ್ಲಘಟ್ಟ: ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯನ್ನು ಶುಕ್ರವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳ­ಲಾಗಿತ್ತು. ತಾಲ್ಲೂಕಿನ 19 ಕ್ಲಸ್ಟರಿನ ಪ್ರೌಢಶಾಲಾ ಹಂತದ ನಾಲ್ಕು ಹೋಬಳಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಜನಪದ ನೃತ್ಯ ಗ್ರಾಮೀಣ ಜನರಲ್ಲಿನ ಕಲೆಗಳನ್ನು ಪ್ರತಿಬಿಂಬಿಸಿತು. ಕ್ಲೇ ಮಾಡೆಲಿಂಗ್‌ ಮಕ್ಕಳ ಆಲೋಚನೆಗೆ ಕೈಗನ್ನಡಿಯಾಗಿತ್ತು. 1ರಿಂದ 4ನೇ ತರಗತಿ, 5ರಿಂದ 7ನೇ ತರಗತಿ ಹಾಗೂ  ಪ್ರೌಢಶಾಲಾ ವಿಭಾಗಗಳನ್ನು ಮಾಡಿದ್ದು ಮೂರು ಹಂತಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಯಿತು ಎಂದು ತೀರ್ಪುಗಾರರಾಗಿದ್ದ ಶ್ಯಾಮಸುಂದರ್‌ ತಿಳಿಸಿದರು.ಪ್ರತಿಭಾ ಕಾರಂಜಿ ಉದ್ಘಾಟಿಸಿದ ಶಾಸಕ ಎಂ.ರಾಜಣ್ಣ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಸುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಬೇಕು. ಶಾಲೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.  ಊಟದ ವ್ಯವಸ್ಥೆ ಸಮರ್ಪಕವಾಗಿರದ ಕಾರಣ ಸ್ಪರ್ಧೆಗಾಗಿ ದೂರದ ಗ್ರಾಮಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೋಟೆಲ್‌ಗೆ ಹೋಗುವಂತಾಗಿತ್ತು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಸ್.ಎನ್.ನಾರಾಯಣ ಸ್ವಾಮಿ, ತಾಲ್ಲೂಕು ಪಂಚಾಯತಿ ಅಧ್ಯ್ಯಕ್ಷ ಯರಬಚ್ಚಪ್ಪ, ಪಿಎಲ್‌ಡಿ ಬ್ಯಾಂಕ್‌ ಅಧ್ಯ್ಯಕ್ಷ ರಾಮಚಂದ್ರಪ್ಪ, ತಹಶೀಲ್ದಾರ್ ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ದೇವರಾಜೇಗೌಡ, ಪುರಸಭೆ ಮುಖ್ಯಾಧಿಕಾರಿ ಚೆನ್ನರಾಯಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ರಂಗಪ್ಪ, ಬಿಆರ್‌ಸಿ ಕೇಂದ್ರ ಸಮನ್ವಯಾಧಿಕಾರಿ ಕೆ.ಸುಮಾ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥ ರೆಡ್ಡಿ ಹಾಜರಿದ್ದರು.

ಪ್ರತಿಕ್ರಿಯಿಸಿ (+)