ಭಾನುವಾರ, ಏಪ್ರಿಲ್ 18, 2021
33 °C

ಪ್ರತಿಭೆಗೆ ಸೂಕ್ತ ವೇದಿಕೆ ಅಗತ್ಯ: ರಘಪತಿ ಭಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ರಹ್ಮಾವರ: ಎಲ್ಲರಲ್ಲೂ ಇರುವ ಪ್ರತಿಭೆಯನ್ನು ಜನರ ಮುಂದೆ ಅನಾವರಣಗೊಳಿಸಲು ವೇದಿಕೆಗಳು ಅಗತ್ಯ. ಸಂಘ ಸಂಸ್ಥೆಗಳ ಮೂಲಕ ಅನೇಕ ಪ್ರತಿಭೆಗಳನ್ನು ಹೊರತರುವ ಕೆಲಸ ಆಗಬೇಕು ಎಂದು ಶಾಸಕ ಕೆ.ರಘುಪತಿ ಭಟ್‌ತಿಳಿಸಿದರು.ವೀರ ಮಾರುತಿ ಮಲ್ಟಿಜಿಮ್ ಮತ್ತು ಬ್ರಹ್ಮಾವರ ರೋಟರ್ಯಾಕ್ಟ್ ಕ್ಲಬ್ ವತಿಯಿಂದ ಪಟ್ಟಣದ ಗಾಂಧಿ ಮೈದಾನದಲ್ಲಿ ಇತ್ತೀಚೆಗೆ ಬೆಂಗಳೂರಿನ ಅಂಧ ಕಲಾವಿದರಿಂದ ನಡೆದ ಸಂಗೀತ ರಸಮಂಜರಿ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಲ್ಪೆ ಉದ್ಯಮಿ ಪ್ರಮೋದ್ ಮಧ್ವರಾಜ್, ನೀಲಾವರ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರ ಬೈಕಾಡಿ ಸುಪ್ರಸಾದ್ ಶೆಟ್ಟಿ, ವಾರಂಬಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ ಬಿರ್ತಿ, ಬ್ರಹ್ಮಾವರ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಪಂಚಮಿ ಮೋಹನ್ ಶೆಟ್ಟಿ, ತಾ.ಪಂ.ಮಾಜಿ ಸದಸ್ಯ ನಿಶಾನ್ ರೈ, ರವಿಪ್ರಕಾಶ್ ಗೋನ್ಸಾಲ್ವಿಸ್, ಹಂದಾಡಿ ಗ್ರಾ.ಪಂ.ಉಪಾಧ್ಯಕ್ಷ ಸುಧೀರ್ ಶೆಟ್ಟಿ, ಡಾ.ಸತೀಶ್ ಪೂಜಾರಿ, ರೋಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಉದಯಕುಮಾರ್ ಇದ್ದರು. ಈ ಸಂದರ್ಭ ಪವರ್ ಲಿಫ್ಟಿಂಗ್‌ನಲ್ಲಿ ಶ್ರೇಷ್ಟ ಸಾಧನೆ ಮಾಡಿದ ರಾಜೇಂದ್ರ ಗಾಣಿಗ ಮತ್ತು ಕೃಷ್ಣ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.