ಪ್ರತಿಭೆ ಅನಾವರಣಕ್ಕೆ ಸ್ಪರ್ಧೆ ಸಹಕಾರಿ

ಸೋಮವಾರ, ಮೇ 20, 2019
30 °C

ಪ್ರತಿಭೆ ಅನಾವರಣಕ್ಕೆ ಸ್ಪರ್ಧೆ ಸಹಕಾರಿ

Published:
Updated:

ಚಳ್ಳಕೆರೆ: ಶಾಲಾ ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಕಲಾ ಉತ್ಸವಗಳು ಸಹಕಾರಿ ಆಗಲಿವೆಎಂದು ಕ್ಷೇತ್ರ ಶಿಕ್ಷಣಾಧಿಕಾರಿಡಿ.ಎ. ತಿಮ್ಮಣ್ಣ ಅಭಿಪ್ರಾಯಪಟ್ಟರು.ಚಳ್ಳಕೆರೆ ಪಟ್ಟಣದ ಕಸ್ತೂರಬಾ ವಸತಿಶಾಲೆಯಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ 2011ನೇ ಸಾಲಿನ `ಮಕ್ಕಳ ಕಲಾ ಉತ್ಸವ ಹಾಗೂ ಕಲಾಶ್ರೀ~ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.ದಿನನಿತ್ಯದ ಪಠ್ಯದಲ್ಲಿನ ಮಾಹಿತಿಯ ಜತೆಗೆ, ಸಹಪಠ್ಯ ಚಟುವಟಿಕೆಗಳು ಮಕ್ಕಳನ್ನು ಸೃಜನಶೀಲ ಹಾಗೂ ಕ್ರಿಯಾಶೀಲರನ್ನಾಗಿ ಮಾಡುತ್ತವೆ. ಪ್ರತಿಯೊಬ್ಬರಲ್ಲೂ ಒಂದೊಂದು ಕಲೆ ಇರುವಂತೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಇಂತಹಸ್ಪರ್ಧೆಗಳಿಂದ ಗುರುತಿಸಬಹುದಾಗಿದೆ ಎಂದರು.ಇಲ್ಲಿಗೆ ಆಗಮಿಸಿರುವ ಮಕ್ಕಳಲ್ಲಿ ವಿಭಿನ್ನವಾದ ಕೌಶಲಗಳು ಎದ್ದು, ಕಾಣಿಸುತ್ತಿವೆ. ಇದರಿಂದ ಒಬ್ಬರಿಂದ ಮತ್ತೊಬ್ಬರು ಅನೇಕ ಕಲೆಗಳನ್ನು ಕರಗತ ಮಾಡಿಕೊಳ್ಳುವ ಇಂತಹ ಸದಾವಕಾಶವನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ವಿದ್ಯಾರ್ಥಿ ಜೀವನದಲ್ಲಿ ಸ್ಪರ್ಧೆ ಎಂಬುದು ಪ್ರತಿಭೆ, ಸಾಮರ್ಥ್ಯ ಇದ್ದವರಿಗೆ ಮಾತ್ರ ಎಂಬ ಕೀಳರಿಮೆ ಬಿಟ್ಟು ಇತರರಂತೆ ಪಾಲ್ಗೊಂಡು, ತಮ್ಮಲ್ಲಿರುವ ಜಾಣ್ಮೆಯನ್ನು ಪ್ರದರ್ಶಿಸಬೇಕು ಎಂಬುದನ್ನು ಅರಿತು ಇಂತಹ ಸ್ಪರ್ಧೆಗಳಲ್ಲಿ ಎಲ್ಲಾ ಮಕ್ಕಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ವೈ. ಆನಂದಮೂರ್ತಿ, ತಾಲ್ಲೂಕು ಕಾರ್ಯದರ್ಶಿ ದುರುಗಪ್ಪ, ತಾಲ್ಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಸೂರನಾಯಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲೋಕೇಶ್, ಕ್ಷೇತ್ರ ಮಾದರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ರುದ್ರಮುನಿ, ಕಸ್ತೂರ ಬಾ ವಸತಿ ಶಾಲೆ ಮುಖ್ಯ ಶಿಕ್ಷಕಿ ಶಿವಲೀಲಾ, ಸಿಆರ್‌ಪಿ ಸರಸ್ವತಿ ಮತ್ತಿತರರು ಇದ್ದರು.   

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry