ಗುರುವಾರ , ಏಪ್ರಿಲ್ 15, 2021
26 °C

ಪ್ರತಿಭೆ ಗೌರವಿಸುವ ಕೆಲಸವಾಗಲಿ: ಪಾಲೆಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುರತ್ಕಲ್‌: ಸಮಾಜದಲ್ಲಿ ಅನೇಕ ಪ್ರತಿಭಾವಂತರಿದ್ದು, ಅವರನ್ನು ಗುರುತಿಸಿ ಪರಿಚಯಿಸುವ ಕೆಲಸವಾಗುತ್ತಿಲ್ಲ, ಎಲೆಯ ಮರೆಯಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಕೆಲಸ ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೆಮಾರ್‌ ಹೇಳಿದರು.ಸುರತ್ಕಲ್‌ ಸಮೀಪದ ಕೃಷ್ಣಾಪುರ ಶ್ರೀ ವಿಶ್ವನಾಥ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಬೊಳ್ಳಾಜೆ  ಫ್ರೆಂಡ್ಸ್‌ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರದಲ್ಲಿ ನೃತ್ಯ ಸಾಧಕಿ ಮಯೂರಿ ಉಳ್ಳಾಲ್‌ ಮತ್ತು ಕರಾಟೆ ಪ್ರತಿಭೆ ಆಕಾಶ್‌ ರತ್ನಾಕರ್‌ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.ಸಂಸದ ನಳಿನ್‌ಕುಮಾರ್‌ ಕಟೀಲು ಮಾತನಾಡಿ, ಸಭೆ ಸಮಾರಂಭಗಳು ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಬೇಕು, ಸ್ಥಳೀಯ ಸಂಘ ಸಂಸ್ಥೆಗಳು  ಈ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು ಎಂದರು.ಪಾಲಿಕೆ ಸದಸ್ಯ ತಿಲಕ್‌ರಾಜ್‌, ಗುತ್ತಿಗೆದಾರ ಎಚ್‌.ಕೆ.ಪುರುಷೋತ್ತಮ, ಎಂ.ಸಂಜೀವ ಶೆಟ್ಟಿ, ಪೇಜಾವರದ ಶ್ರೀ ಮಹಾದೇವ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್‌ ಶೆಟ್ಟಿ, ಕಲ್ಲಡ್ಕ ಶ್ರೀ ರಾಮ ಭಜನಾ ಮಂಡಳಿಯ ಕಾರ್ಯದರ್ಶಿ ಜಿತೇಂದ್ರ ಕೊಟ್ಟಾರಿ, ಬಿಜೆಪಿ ಮಂಗಳೂರು ಉತ್ತರ ಕ್ಷೇತ್ರ  ನಗರ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ವಸಂತ ಹೊಸಬೆಟ್ಟು, ಉದ್ಯಮಿ ಮಹಾಬಲ ಪೂಜಾರಿ ಕಡಂಬೋಡಿ, ವೇದಾವತಿ ಕಾಟಿಪಳ್ಳ,  ವಿಶ್ವನಾಥ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಮಹಾಬಲ ರೈ, ಸಂಸ್ಥಾಪಕ ವಾಸುದೇವ, ನೆಲ್ಲಿಕಟ್ಟೆ ನಾರಾಯಣ ಹಾಸ್ಯಗಾರ, ಎಂ ನಾರಾಯಣ, ಯಾದವ ಶೆಟ್ಟಿ, ಶಿವಪ್ರಸಾದ್‌ ಬೊಳ್ಳಾಜೆ  ಮತ್ತಿತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.