ರಿಪ್ಪನ್ಪೇಟೆ: ಪ್ರತಿಯೊಬ್ಬ ಪ್ರಜೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ಸರ್ಕಾರದ ಪ್ರಮುಖ ಆಶಯ ಎಂದು ವಿಧಾನ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.

ಕೆರೆಹಳ್ಳಿ ಹೋಬಳಿಯ ಬಾಳೂರು, ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸೋಮವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಜನಸಾಮಾನ್ಯರ ನಾಡಿ ಮಿಡಿತ ಅರಿತು ಅವರಿಗೆ ಮೂಲ ಸೌಕರ್ಯ ಕಲ್ಪಿಸುವುದು ಚುನಾಯಿತ ಪ್ರತಿನಿಧಿಗಳ ಆದ್ಯ ಕರ್ತವ್ಯ. ಜೊತೆಗೆ ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವಲ್ಲಿ ಅಧಿಕಾರಿಗಳೂ ಸಹ ಬದ್ಧತೆ ತೋರಬೇಕು. ಆಗ ಮಾತ್ರ ಗ್ರಾಮಗಳು ಅಭಿವೃದ್ಧಿ ಕಾಣಲು ಸಾಧ್ಯ ಎಂದರು.

ಸುಮಾರು ರೂ60 ಲಕ್ಷಕ್ಕೂ ವೆಚ್ಚದ ಕುಡಿಯುವ ನೀರಿನ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ಅವರು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾ ಯ್ತಿ ಸದಸ್ಯ ಕಲಗೋಡು ರತ್ನಾಕರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನಾಗರತ್ನಾ ದೇವರಾಜ್, ಉಪಾಧ್ಯಕ್ಷೆ ಗೀತಾ ನಿಂಗಪ್ಪ, ರಿಪ್ಪನ್ಪೇಟೆ ಪಂಚಾಯ್ತಿ ಅಧ್ಯಕ್ಷ ಎನ್. ಚಂದ್ರೇಶ, ಬಾಳೂರು ಸುಲೋಚನಾ ಮಂಜಪ್ಪ, ಎಪಿಎಂಸಿ ಉಪಾಧ್ಯಕ್ಷ ಡಿ.ಕೆ. ನಾರಾಯಣ್ರಾವ್, ಜಿಲ್ಲಾ ಪಂಚಾಯ್ತಿ ಅಭಿಯಂತರ ಶಿವಮೂರ್ತಿ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ದೇವೇಂದ್ರಪ್ಪ ಗೌಡ, ಗ್ರಾಮ ಪಂಚಾಯ್ತಿ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.