ಚಿಕ್ಕಮಗಳೂರು: ಸಮಾಜದಲ್ಲಿ ವಾಸಿ ಸುವ ಪ್ರತಿಯೊಬ್ಬ ವ್ಯಕ್ತಿಗಳ ಹಕ್ಕುಗಳನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಎಸ್.ಬಿ. ವಸ್ತ್ರಮಠ ತಿಳಿಸಿದರು.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ ಹಾಗೂ ವಾರ್ತಾ ಇಲಾಖೆ ಆಶ್ರಯದಲ್ಲಿ ನಗರದ ಡಾಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯರ ಹಕ್ಕುಗಳ ಉಲ್ಲಂಘನೆಯಾ ಗುವುದನ್ನು ತಡೆಯಲು ಕೇಂದ್ರ ಸರ್ಕಾರ 1994ರ ಜೂನ್ 28 ರಂದು ಮಾನವ ಹಕ್ಕುಗಳ ಆಯೋಗ ರಚಿಸಿತು. ಇದಕ್ಕೆ ಹೊಂದಾಣಿಕೆಯಾಗಿ ಮಹಿಳಾ ಹಕ್ಕುಗಳ ಆಯೋಗ ಮಕ್ಕಳ ಹಕ್ಕುಗಳ ಆಯೋಗ ಸೇರಿದಂತೆ ಹಲವು ಆಯೋಗಳು ರಚನೆಯಾದವು. ಮನು ಷ್ಯನ ಹಕ್ಕುಗಳಿಗೆ ಚ್ಯುತಿ ಬಂದಾಗ ವಿಚಾ ರಣೆ ಮಾಡಿ ನ್ಯಾಯ ದೊರಕಿಸಿ ಕೊಡು ವುದು ಆಯೋಗದ ಉದ್ದೇಶ ಎಂದರು.

ಸಮಾಜದಲ್ಲಿ ವಾಸಿಸುವ ಪ್ರತಿಯೊ ಬ್ಬರು ತಮ್ಮ ಹಕ್ಕಿಗೆ ಗೌರವ ಕೊಡು ವಂತೆ ಇನ್ನೊಬ್ಬರ ಹಕ್ಕುಗಳನ್ನು ಗೌರವಿ ಸಬೇಕು ಎಂದರಲ್ಲದೇ ಯಾವುದೇ ಒಬ್ಬ ವ್ಯಕ್ತಿಯನ್ನು ಅಕ್ರಮವಾಗಿ ಬಂಧನದಲ್ಲಿ ಇಡುವಂತಿಲ್ಲ. ಬಂಧಿಸಿದ 24 ಗಂಟೆಯೊಳಗೆ ಆತನನ್ನು ನ್ಯಾಯಾ ಧೀಶರ ಮುಂದೆ ಹಾಜರು ಪಡಿಸಬೇಕು. ಪೊಲೀಸ್ ಇಲಾಖೆಯಲ್ಲಿ ಕೆಲವು ಸಂದರ್ಭದಲ್ಲಿ 2 ರಿಂದ 3 ದಿವಸಗಳು ಕೂಡಿ ಹಾಕಿರುವ ಉದಾಹರಣೆಗಳಿವೆ. ಈ ರೀತಿ ಮಾಡುವಂತಿಲ್ಲ. ಇದು ಆ ವ್ಯಕ್ತಿಯ ಹಕ್ಕಿನ ಉಲ್ಲಂಘನೆಯಾ ಗುತ್ತದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಬಿ.ಎಸ್.ಶೇಖರಪ್ಪ ಮಾತನಾಡಿ, ನಮ್ಮ ಕರ್ತವ್ಯದಲ್ಲಿ ನಾವು ನಮ್ಮ ಹಕ್ಕುಗಳನ್ನು ಚಲಾಯಿ ಸುವಾಗ ಬೇರೆಯವರ ಹಕ್ಕುಗಳನ್ನು ಗೌರವಿಸಬೇಕು. ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬ ಅಧಿಕಾರಿಗಳ ಮೇಲಿದೆ. ತಲುಪಿಸದೇ ಇದ್ದರೆ ಆತನ ಹಕ್ಕಿಗೆ ಚ್ಯುತಿ ತಂದಂತೆ ಇದನ್ನು ಅರಿತು ಅಧಿಕಾರಿಗಳು ಕೆಲಸ ಮಾಡಬೇಕೆಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿ ಷೇಕ ಗೋಯಲ್ ಮಾತನಾಡಿ, ಮಾನ ವ ಹಕ್ಕುಗಳ ಕುರಿತು ನೋಡಿ ದಾಗ ಹೆಚ್ಚು ದೂರುಗಳು ಪೊಲೀಸ್ ಇಲಾಖೆ ಯಿಂದ ಬರುತ್ತವೆ. ಕಳೆದ ಎಂಟತ್ತು ವರ್ಷಗಳಿಂದ ಪೊಲೀಸ್ ಇಲಾಖೆ ಜನ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.

ವಕೀಲರಾದ ಡಿ.ಬಿ.ಸುಜೀಂದ್ರ ಮಾನವ ಹಕ್ಕುಗಳ ಕುರಿತು, ಡಿ.ಎಸ್. ಮಮತ ಮಕ್ಕಳ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕರುಣಾಕರ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾ ಧೀಶರು ಮತ್ತು ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಮಹ ದೇವಯ್ಯ ವಕೀಲರ ಸಂಘದ ಕಾರ್ಯದರ್ಶಿ ಐ.ಎಸ್.ತೇಜಸ್ವಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.