ಶುಕ್ರವಾರ, ಮೇ 27, 2022
22 °C

ಪ್ರತಿ ಜಿಲ್ಲೆಯಲ್ಲೂ ಪದವೀಧರರ ಭವನ ನಿರ್ಮಾಣ: ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ:`ವಿದ್ಯಾರ್ಥಿ ಜೀವನದಿಂದಲೂ ಪದವೀಧರ ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತ ಬಂದಿರುವ ನನಗೆ ಮತ ನೀಡಿ ಜಯಶಾಲಿಯನ್ನಾಗಿ ಮಾಡಬೇಕು~ ಎಂದು ನೈಋತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ದಿನೇಶ್ ಮನವಿ ಮಾಡಿದರು.`ಐದು ಜಿಲ್ಲೆ ಮತ್ತು ಎರಡು ತಾಲ್ಲೂಕುಗಳು ಈ ಕ್ಷೇತ್ರದಲ್ಲಿ ಬರುತ್ತವೆ. ಚುನಾವಣೆಯಲ್ಲಿ ಜಯಗಳಿ ಸಿದರೆ ಪ್ರತಿ ಜಿಲ್ಲೆಯಲ್ಲೂ ಪದವೀಧರರ ಭವನ ನಿರ್ಮಿ ಸಲಾ ಗುತ್ತದೆ. ಯಾವುದೇ ಹುದ್ದೆ ಇದ್ದರೂ ಸರ್ಕಾರ ಈಗ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುತ್ತಿದೆ.

 

ಆದ್ದರಿಂದ ಗ್ರಾಮೀಣ ಪ್ರದೇ ಶದ ನಿರುದ್ಯೋಗಿ ಪದವೀಧರರು ಮತ್ತು ನಗರ ಪ್ರದೇಶದ ಪದವೀಧರರಿಗೆ ಅನುಕೂಲವಾ ಗುವಂತೆ ಈ ಭವನಗಳಲ್ಲಿ ಕಂಪ್ಯೂಟರ್ ವ್ಯವಸ್ಥೆ ಕಲ್ಪಿಸಲಾಗುತ್ತದೆ.ಇದರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅನುಕೂಲವಾಗಲಿದೆ~ ಎಂದು ಶುಕ್ರ ವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.`ಈ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿರುವ ಡಿ.ಎಚ್. ಶಂಕರ ಮೂರ್ತಿ ಅವರು ಸ್ವಂತ ಪದವಿಗಾಗಿ ದುಡಿದಿದ್ದಾರೆಯೇ ಹೊರತು ಪದವೀಧರರ ಸಮಸ್ಯೆಗಳ ಬಗ್ಗೆ ಗಮನ ಹರಿಸಿಲ್ಲ. ಆದ್ದರಿಂದ ಈ ಬಾರಿ ಮತದಾರರು ನನ್ನನ್ನು ಆಯ್ಕೆ ಮಾಡುವ ವಿಶ್ವಾಸ ಇದೆ.

 

ಕಾಂಗ್ರೆಸ್ ಪಕ್ಷ ಹತ್ತು ತಿಂಗಳ ಹಿಂದೆಯೇ ನನ್ನನ್ನು ಅಭ್ಯರ್ಥಿ ಎಂದು ಘೋಷಿಸಿತ್ತು. ಆ ನಂತರ ಕಾರ್ನೋನ್ಮುಖನಾದ ನಾನು ಪದವೀಧರ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿದ್ದೇನೆ. ಇದು ಸಹ ಸಹಕಾರಿಯಾಗಲಿದೆ ಎಂಬ ವಿಶ್ವಾಸ ಇದೆ~ ಎಂದರು.ಆನ್‌ಲೈನ್ ಕೌನ್ಸೆಲಿಂಗ್ ಇರಲಿ: ವೀರಪ್ಪ ಮೊಯ್ಲಿ ಅವರು ಮುಖ್ಯ ಮಂತ್ರಿ ಆಗಿದ್ದಾಗ ಎಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‌ಗಳಿಗೆ ಆನ್‌ಲೈನ್‌ನಲ್ಲಿ ಕೌನ್ಸೆಲಿಂಗ್ ನಡೆಸುವ ಪದ್ಧತಿಯನ್ನು ಜಾರಿಗೆ ತಂದರು. ಆದರೆ ಬಿಜೆಪಿ ಸರ್ಕಾರ ಇದನ್ನು ರದ್ದು ಮಾಡಿ ಹಾಗೆಯೇ ಸೀಟು ಹಂಚುವ ಬಗ್ಗೆ ಚಿಂತಿಸುತ್ತಿದೆ ಎಂದು ಗೊತ್ತಾಗಿದೆ. ಪಾರದರ್ಶಕವಾಗಿರುವ ಆನ್‌ಲೈನ್ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಹೋಗಬೇಕು. ಯಾವುದೇ ಕಾರಣಕ್ಕೂ ರದ್ದು ಮಾಡಬಾರದು ಎಂದು ಅವರು ಆಗ್ರಹಿಸಿದರು.ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪಿ.ಅಮೃತ್ ಶೆಣೈ ಮತ್ತು ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೀರ್ತಿ ಶೆಟಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.