ಪ್ರತ್ಯೇಕ ಅಪಘಾತ: ಎರಡು ಸಾವು
ನೆಲಮಂಗಲ: ದಾಬಸ್ಪೇಟೆ ಮತ್ತು ಮಾದನಾಯಕನಹಳ್ಳಿ ಠಾಣೆಗಳ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ವ್ಯಕ್ತಿ ಹಸು ಖರೀದಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೆ ಮೃತಪಟ್ಟ ಘಟನೆ ದಾಬಸ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅಂಚೆಮನೆ ಗ್ರಾಮದ ಬಳಿ ಸಂಭವಿಸಿದೆ. ಮೃತನು ರಾಯಚೂರಿನ ಸಿಂಧನೂರು ತಾಲ್ಲೂಕಿನ ವೀರೇಶ್ (35) ಎಂದು ಗುರುತಿಸಲಾಗಿದೆ. ವಾಹನದ ಚಕ್ರ ವೀರೇಶ್ನ ತಲೆ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೆ ಮೃತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಬಸ್ಪೇಟೆ ಠಾಣೆ ಸಬ್ಇನ್ಸ್ಪೆಕ್ಟರ್ ಎಸ್.ರವಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಮಾಕಳಿ ಸಮೀಪ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ.
ಮೃತರು ರಾಯಚೂರು ಮೂಲದ ದೇವರಾಜು (40) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಐ.ಬಿ.ರೆಡ್ಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.