ಭಾನುವಾರ, ಏಪ್ರಿಲ್ 18, 2021
33 °C

ಪ್ರತ್ಯೇಕ ಅಪಘಾತ ಮೂವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |ಹೊಸಕೋಟೆ: ಇಲ್ಲಿನ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.ಬೆಂಗಳೂರು ರಸ್ತೆಯ ಮೇಡಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ಪ್ರಿಯಾಂಕ ನಗರದ ಮೇರಿ (38) ಮತ್ತು ಮುನಿರತ್ನ (39) ಎಂಬುವವರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದುದರಿಂದ ಮೇರಿ ಸ್ಥಳದಲ್ಲೇ ಮೃತಪಟ್ಟರು. ತೀವ್ರ ಗಾಯಗೊಂಡ ಮುನಿರತ್ನ ಅವರನ್ನು  ಚಿಕಿತ್ಸೆಗೆ ಬೆಂಗಳೂರಿನ ನಿಮ್ಹಾನ್ಸ್‌ಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟರು. ಅವರಿಬ್ಬರು ಮನೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದ ನಂತರ ಲಾರಿ ನಿಲ್ಲಿಸದೆ ಪರಾರಿಯಾಗಿದೆ.ಮತ್ತೊಂದು ಪ್ರಕರಣದಲ್ಲಿ ಕೋಲಾರ ರಸ್ತೆಯ ಕೊಳತೂರು ಗೇಟ್ ಬಳಿ ಕ್ಯಾಂಟರ್ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದುದರಿಂದ ಅದರ ಸವಾರ ಕೊಳತೂರು ಗ್ರಾಮದ ಮಂಜೇಗೌಡ (38) ಸ್ಥಳದಲ್ಲೇ ಮೃತಪಟ್ಟರು. ಅವರು ಬೆಳೆದ ಗುಲಾಬಿ ಹೂವನ್ನು ಮಾರಾಟಮಾಡಿ ಗ್ರಾಮಕ್ಕೆ ಹೋಗಲು ಹೆದ್ದಾರಿಯಲ್ಲಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಈ ಅಪಘಾತ ನಡೆಯಿತು. ಪೊಲೀಸರು ಎರಡೂ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.