ಬೆಂಗಳೂರು: ಫ್ರೇಜರ್ಟೌನ್, ದೇವನಹಳ್ಳಿ ವಿಮಾನ ನಿಲ್ದಾಣ, ರಾಜಾಜಿನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ವಿದ್ಯಾರ್ಥಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಬೈಕ್ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿ ಟ್ಯಾಂಕರ್ನ ಹಿಂದಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಪುಲಿಕೇಶಿನಗರ ಸಮೀಪ ಶುಕ್ರವಾರ ಸಂಭವಿಸಿದೆ.

ನಗರದ ಹೊರಮಾವುವಿನ ಭಾಗೀರಥ್ ಶರ್ಮಾ ಅವರ ಮಗ ಸುಮಿತ್ ಶರ್ಮಾ(19) ಮೃತಪಟ್ಟವರು. ನಗರದ ಸಿಎಂಐಆರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಸುಮಿತ್ ಪುಲಿಕೇಶಿನಗರದಲ್ಲಿರುವ ತನ್ನ ಸ್ನೇಹಿತನ ಮನೆಗೆ ಹೋಗುವುದಾಗಿ ತಾಯಿ ಬಳಿ ಹೇಳಿ ಹೋಗ್ದ್ದಿದರು.

ನೇತಾಜಿ ವೃತ್ತದಿಂದ ಹೆನ್ಸ್ ರಸ್ತೆ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮುಂದೆ ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಅನ್ನು ಹಿಂದಿಕ್ಕುವ ಆತುರದಲ್ಲಿ ಬೈಕ್ನ ಹ್ಯಾಂಡಲ್ ಟ್ಯಾಂಕರ್ಗೆ ತಗುಲಿದೆ. ನಿಯಂತ್ರಣ ಕಳೆದುಕೊಂಡ ಸುಮಿತ್ ವಾಹನದ ಹಿಂದಿನ ಚಕ್ರಕ್ಕೆ ಸಿಲುಕಿದರು.

ಘಟನೆಯಲ್ಲಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯೆ ಸುಮಿತ್ ಸಾವನ್ನಪ್ಪಿದರು ಎಂದು ಪೊಲೀಸರು ಹೇಳ್ದ್ದಿದಾರೆ. ಫ್ರೇಜರ್ಟೌನ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ: ಮಹಿಳೆ ಸಾವು
ಆಟೊಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಲಾವತಿ (42) ಎಂಬ ಮಹಿಳೆ ಸಾವನ್ನಪ್ಪಿದ್ದು, ಮೃತರ ಪತಿ ಹಾಗೂ ಸಂಬಂಧಿ ಗಾಯಗೊಂಡಿರುವ ಘಟನೆ ದೇವನಹಳ್ಳಿ ವಿಮಾನ ನಿಲ್ದಾಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಭವಿಸಿದೆ.

ನಗರದ ಬಿದರಹಳ್ಳಿ ಸಮೀಪದ ವೀರ್ಗೋನಗರದ ನಿವಾಸಿ ಜಗನ್ನಾಥ್ ಅವರು ರಾತ್ರಿ ತನ್ನ ಪತ್ನಿ ಕಲಾವತಿ ಹಾಗೂ ಅಣ್ಣ ಪ್ರಕಾಶ್ ಅವರೊಂದಿಗೆ ಆಟೊದಲ್ಲಿ ಮನೆಗೆ ಹೋಗುತ್ತಿದ್ದರು.

ರಾತ್ರಿ 9.30ರ ಸುಮಾರಿಗೆ ರಾಂಪುರ ಕಡೆಯಿಂದ ಬಿಳಿಶಿವಾಲಯ ಮುಖ್ಯರಸ್ತೆ ಕಡೆ ಹೋಗುವಾಗ ವೇಗವಾಗಿ ಬಂದ ಕಾರು ಆಟೊಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಕಲಾವತಿ ಅವರನ್ನು ಕೊತ್ತನೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ಅವರು ಮೃತಪಟ್ಟಿರುವುದನ್ನು ವೈದ್ಯರು ಧೃಢಪಡಿಸಿದರು ಎಂದು ಪೊಲೀಸರು ಹೇಳಿದ್ದಾರೆ.

ಪ್ರಕಾಶ್ ಹಾಗೂ ಆಟೊ ಚಾಲಕ ಜಗನ್ನಾಥ್ ಪ್ರಾಣಾಪಾಯದಿಂದ ಪಾರಾಗಿದ್ದು, ಕಾರು ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ದೇವನಹಳ್ಳಿ ವಿಮಾನ ನಿಲ್ದಾಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ: ಸಾವು
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಂದಿನ ಲೇಔಟ್ನ ವರ್ತುಲ ರಸ್ತೆಯಲ್ಲಿರುವ ರಾಜ್ಕುಮಾರ್ ಸಮಾಧಿ ಸಮೀಪ ಶುಕ್ರವಾರ ರಾತ್ರಿ ಸಂಭವಿಸಿದೆ. ರಾತ್ರಿ 10 ಗಂಟೆ ಸುಮಾರಿಗೆ ರಾಜ್ಕುಮಾರ್ ಸಮಾದಿ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದರು.

ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಗೊತ್ತಾಗಿಲ್ಲ. ಶವವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದೆ. ರಾಜಾಜಿನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.