ಪ್ರತ್ಯೇಕ ಅಪಘಾತ 9 ಸಾವು

7

ಪ್ರತ್ಯೇಕ ಅಪಘಾತ 9 ಸಾವು

Published:
Updated:

ಬೆಂಗಳೂರು (ಪಿಟಿಐ); ಕಳೆದ ರಾತ್ರಿಯಿಂದೇಚೆಗೆ ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 9 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.ಸಿದ್ದಾಪುರದ ಬಳಿ ಲಾರಿ ಹಾಗೂ ಕಾರಿನ ಮಧ್ಯೆ ಕಳೆದ ರಾತ್ರಿ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಮೃತರಾಗಿ ಒಬ್ಬರು ಗಾಯಗೊಂಡಿದ್ದಾರೆ.ಟೆಂಪೊ ಒಂದು ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದ ಪರಿಣಾಮ 5 ಮಂದಿ ಮೃತರಾದ ದಾರುಣ ಘಟನೆ ಹಾಸನ ಸಮೀಪ ಶಾಂತನಹಳ್ಳಿಯಲ್ಲಿ ಸಂಭವಿಸಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಘಟನೆಯಲ್ಲಿ 9 ಮಂದಿಗೆ ಗಾಯಗಳಾಗಿವೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry