ಶನಿವಾರ, ಮೇ 8, 2021
26 °C

ಪ್ರತ್ಯೇಕ ಘಟನೆ: ಇಬ್ಬರ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಮಮೂರ್ತಿನಗರ ಹಾಗೂ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಸುಕಿನಲ್ಲಿ ನಡೆದಿದೆ.



ಮೂಲತಃ ಕೋಲಾರ ಜಿಲ್ಲೆಯ ಬಂಗಾರಪೇಟೆಯವರಾದ ಚಂದ್ರಮ್ಮ(24) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಜತೆ ಐದು ವರ್ಷದ ಹಿಂದೆ ಚಂದ್ರಮ್ಮ ಅವರ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದರು.



ವರದಕ್ಷಿಣೆ ಹಣಕ್ಕಾಗಿ ಶಿವಕುಮಾರ್ ತನ್ನ ಮಗಳನ್ನು ಪೀಡಿಸುತ್ತಿದ್ದ. ಇದರಿಂದಲೇ ಅವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತರ ಪೋಷಕರು ದೂರು ನೀಡಿದ್ದಾರೆ.ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಶಿವಕುಮಾರ್‌ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರಾಮಮೂರ್ತಿನಗರ ಪೊಲೀಸರು ತಿಳಿಸಿದರು.



ಯುವಕ ಆತ್ಮಹತ್ಯೆ: ಆಟೊ ಚಾಲಕರೊಬ್ಬರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪಟ್ಟೇಗಾರ ಪಾಳ್ಯದ ನಿವಾಸಿ ಸುನಿಲ್(23) ಆತ್ಮಹತ್ಯೆ ಮಾಡಿಕೊಂಡವರು. ಆಟೊ ಚಾಲಕರಾಗಿದ್ದ ಅವರು, ಮನೆ ಸಮೀಪದ ಕಡಪ ಸ್ವಾಮಿ ಮಠದ ಆವರಣದಲ್ಲಿರುವ ಆಲದ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಗುರುವಾರ ಬೆಳಿಗ್ಗೆ ಒಂಬತ್ತು ಗಂಟೆ ಸುಮಾರಿಗೆ ಶವವನ್ನು ಕಂಡ ಸ್ಥಳೀಯರು ಅವರ ಅಣ್ಣ ಅನಿಲ್‌ಗೆ ಮಾಹಿತಿ ನೀಡಿದ್ದಾರೆ.



ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಅವರ ಕುಟುಂಬಕ್ಕೆ ಒಪ್ಪಿಸಲಾಯಿತು ಎಂದು ಪೊಲೀಸರು ತಿಳಿಸಿದರು. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.