ಶುಕ್ರವಾರ, ಜೂನ್ 18, 2021
27 °C

ಪ್ರತ್ಯೇಕ ನಿರಾಶ್ರಿತರ ಪರಿಹಾರ ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಪ್ರತಿ ಕಂದಾಯ ವಿಭಾಗದ ಒಂದು ಜಿಲ್ಲೆಯಲ್ಲಿ ಭಿಕ್ಷುಕಿಯರಿಗಾಗಿ ಪ್ರತ್ಯೇಕ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಇ.ವೆಂಕಟಯ್ಯ ತಿಳಿಸಿದರು.

ಕೇಂದ್ರ ಪರಿಹಾರ ಸಮಿತಿ ಮಂಗಳವಾರ ಏರ್ಪಡಿಸಿದ್ದ `ರಾಜ್ಯಮಟ್ಟದ ತಂತ್ರಜ್ಞಾನ ಆಧಾರಿತ ಭಿಕ್ಷಕರ ತಲೆ ಎಣಿಕೆ ಕಾರ್ಯಾಗಾರ~ದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

`ರಾಜ್ಯದಲ್ಲಿ ಇರುವ ಭಿಕ್ಷುಕರ ಸಂಖ್ಯೆ ಎಷ್ಟಿದೆ ಎಂಬ ಬಗ್ಗೆ ಇದುವರೆಗೆ ಖಚಿತ ಮಾಹಿತಿ ಇರಲಿಲ್ಲ. ಭಿಕ್ಷುಕರ ನಿಖರವಾದ ಸಂಖ್ಯೆ ತಿಳಿಯಲು ಸಮೀಕ್ಷೆ ಅತ್ಯಗತ್ಯ. ಸಮೀಕ್ಷೆಯಿಂದ ಭಿಕ್ಷಾಟನೆ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು. ಆದರೆ ಇತರ ಸಮೀಕ್ಷೆಗಳಂತೆ ಭಿಕ್ಷಕುರ ಸಮೀಕ್ಷೆ ಸುಲಭದ ಕಾರ್ಯವಲ್ಲ~ ಎಂದು  ಅಭಿಪ್ರಾಯಪಟ್ಟರು.

ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷ ಕೆ.ಎ.ರಾಮಲಿಂಗಪ್ಪ ಮಾತನಾಡಿ, `ಬೆಂಗಳೂರಿನಲ್ಲಿರುವ ನಿರಾಶ್ರಿತರ ಪುನರ್‌ವಸತಿ ಕೇಂದ್ರದ ರೀತಿಯಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿ ಪುನರ್‌ವಸತಿ ಕೇಂದ್ರಗಳಿವೆ. ಉಳಿದ 16 ಜಿಲ್ಲೆಗಳಲ್ಲಿ ಕೇಂದ್ರಗಳ ಸ್ಥಾಪನೆಗಾಗಿ ಜಮೀನು ಖರೀದಿಸುವ ಕಾರ್ಯಕ್ಕೆ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ~ ಎಂದು ಅವರು ಹೇಳಿದರು.

ಸಮಿತಿಯ ಸಲಹೆಗಾರ ಯು.ಮೋಹನ್ ಚಂದ್ರ ಮಾತನಾಡಿ, `ಸಾಂಪ್ರದಾಯಿಕ ಗಣತಿ ಕಾರ್ಯಕ್ಕೆ 30 ಲಕ್ಷ ರೂಪಾಯಿ ವೆಚ್ಚವಾಗುತ್ತಿತ್ತು. ಬೆಂಗಳೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಅತ್ಯಂತ ಕಡಿಮೆ ವೆಚ್ಚದಲ್ಲಿ ತಂತ್ರಜ್ಞಾನ ಆಧಾರಿತ ಗಣತಿ ಕಾರ್ಯವನ್ನು ನಡೆಸಿದೆವು. ಗಣತಿಯ ವಿವರಗಳು ಈ ತಿಂಗಳ 26ಕ್ಕೆ ಲಭ್ಯವಾಗಲಿವೆ~ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ನವೀನ್ ರಾಜ್ ಸಿಂಹ ಮಾತನಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.