ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಆತ್ಮಹತ್ಯೆ

7

ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಆತ್ಮಹತ್ಯೆ

Published:
Updated:

ಬೆಂಗಳೂರು: ನಗರದ ಸೋಲದೇವನಹಳ್ಳಿ, ಆರ್‌ಎಂಸಿ ಯಾರ್ಡ್ ಮತ್ತು ಸಂಪಗೆಹಳ್ಳಿಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಟ್ರ್ಯಾಕ್ಟರ್ ಚಾಲಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಲದೇವನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಸೋಲದೇವನಹಳ್ಳಿಯ ಲಕ್ಷ್ಮಿನಾರಾಯಣ (45) ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ ಮತ್ತು ಮೂವರು ಮಕ್ಕಳ ಜತೆ ಅವರು ಐಐಎಚ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮದ್ಯ ವ್ಯಸನಿಯಾಗಿದ್ದರು. ರಾತ್ರಿ ಮನೆಗೆ ಬಂದು ಊಟ ಮಾಡಿದ ಅವರು ಪತ್ನಿ ರಮಾಮಣಿ ಅವರಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಕೊಠಡಿಯೊಳಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಕೊಠಡಿಯಲ್ಲೇ ಅವರ ಹತ್ತು ವರ್ಷದ ಮಗ ದತ್ತುಸಾಯಿ ಮಲಗಿದ್ದ ಎಂದು ಪ್ರಕರಣ ದಾಖಲಿಸಿಕೊಂಡಿರುವ ಸೋಲದೇವನಹಳ್ಳಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಆರ್‌ಎಂಸಿ ಯಾರ್ಡ್: ಜೀವನದಲ್ಲಿ ಜಿಗುಪ್ಸೆಗೊಂಡ ಕೂಲಿ ಕಾರ್ಮಿಕ ನಾಗೇಗೌಡ (55) ಎಂಬುವರು ಗೊರಗುಂಟೆಪಾಳ್ಯದ ಎಂಎಸ್‌ಕೆ ನಗರದ ತಮ್ಮ ಮನೆಯಲ್ಲಿ ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮದ್ಯ ವ್ಯಸನಿಯಾಗಿದ್ದ ನಾಗೇಗೌಡ ಅವರ ವರ್ತನೆಯಿಂದ ಪತ್ನಿ ಮತ್ತು ಮಗ ಬೇಸತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಆಗಾಗ್ಗೆ ಜಗಳವಾಗುತ್ತಿತ್ತು. ಮಗ ಮತ್ತು ಪತ್ನಿ ಮನೆಯಲ್ಲಿ ಇಲ್ಲದ ವೇಳೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಪಿಗೆಹಳ್ಳಿ:ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪಿಗೆಹಳ್ಳಿಯ ಥಣಿಸಂದ್ರದಲ್ಲಿ ಗುರುವಾರ ನಡೆದಿದೆ.

ಮೂಲತಃ ಕುಷ್ಟಗಿಯ ಸಂಗಮೇಶ್ (26) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಸಂಗಮೇಶ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪೋಷಕರಿಗೆ ಗುರುವಾರ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ವಿಷಯ ತಿಳಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry