ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

7

ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Published:
Updated:

ಬೆಂಗಳೂರು: ಗೋವಿಂದರಾಜು (55) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ.ಕಾಮಾಕ್ಷಿಪಾಳ್ಯ ಬಳಿಯ ರಂಗನಾ ಥಪುರದ ನಿವಾಸಿಯಾಗಿದ್ದ ಅವರು ಮದ್ಯ ವ್ಯಸನಿಯಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.ಮತ್ತೊಂದು ಪ್ರಕರಣ: ರಾಜೇಂದ್ರ (24) ಎಂಬ ಆಟೊ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂ ಡಿರುವ ಘಟನೆ ಕಾಮಾಕ್ಷಿಪಾಳ್ಯದ ಸಣ್ಣಕ್ಕಿ ಬಯಲು ಬಡಾವಣೆಯಲ್ಲಿ ಬುಧವಾರ ನಡೆದಿದೆ.ಅವರು ತಮ್ಮ ಮನೆಯ ಎದುರಿ ಗಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧ ವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಎರಡೂ ಪ್ರಕರಣಗಳು ಕಾಮಾ ಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾಗಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry