ಭಾನುವಾರ, ಜನವರಿ 26, 2020
31 °C

ಪ್ರತ್ಯೇಕ ಪ್ರಕರಣ: ವಿಷ ಸೇವಿಸಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಾಮರಾಜಪೇಟೆ ಒಂದನೇ ಮುಖ್ಯರಸ್ತೆ ನಿವಾಸಿ ರಾಜೇಶ್‌ಶರ್ಮಾ (35) ಮತ್ತು ಎಚ್‌ಎಸ್‌ಆರ್‌ ಲೇಔಟ್‌ ಒಂದನೇ ಹಂತದ ನಿವಾಸಿ ಪ್ರಭಾಕರ್‌ (42) ಎಂಬುವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಾಜಸ್ತಾನ ಮೂಲದ ರಾಜೇಶ್‌ಶರ್ಮಾ, ಕಾಟನ್‌ಪೇಟೆಯ ಪ್ರಿಂಟಿಂಗ್ ಪ್ರೆಸ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದರು.ಪತ್ನಿ ಮತ್ತು ಮಕ್ಕಳು ಡಿ.9ರಂದು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಶನಿವಾರ ರಾತ್ರಿ ಮೃತಪಟ್ಟರು ಎಂದು ಚಾಮರಾಜಪೇಟೆ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.ಮತ್ತೊಂದು ಪ್ರಕರಣ: ಪ್ರಭಾಕರ್‌, ಕುಟುಂಬ ಸದಸ್ಯರೊಂದಿಗೆ ಎಚ್‌ಎಸ್ಆರ್‌ ಲೇಔಟ್‌ 24ನೇ ಮುಖ್ಯರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಮನೆಯ ಸಮೀಪವೇ ಬಜ್ಜಿ ಅಂಗಡಿ ಇಟ್ಟುಕೊಂಡಿದ್ದ ಅವರು ಮದ್ಯವ್ಯಸನಿಯಾಗಿದ್ದರು.ಪ್ರಭಾಕರ್‌, ಡಿ.10ರಂದು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಶನಿವಾರ ಸಾವನ್ನಪ್ಪಿದರು ಎಂದು ಪೊಲೀಸರು ಹೇಳಿದ್ದಾರೆ.ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತಿಕ್ರಿಯಿಸಿ (+)