ಮಂಗಳವಾರ, ಮೇ 11, 2021
27 °C

ಪ್ರತ್ಯೇಕ ಪ್ರಕರಣ ಸರ ದೋಚಿದ ದುಷ್ಕರ್ಮಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಕೊಡಿಗೇಹಳ್ಳಿ, ಯಲಹಂಕ ಹಾಗೂ ಶೇಷಾದ್ರಿಪುರ ಪೊಲೀಸ್ ಠಾಣೆ ವ್ಯಾಪ್ತಿ ಬುಧವಾರ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ದುಷ್ಕರ್ಮಿಗಳು ಮೂವರು ಮಹಿಳೆಯರ ಚಿನ್ನದ ಸರಗಳನ್ನು ದೋಚಿದ್ದಾರೆ.

ಕೊಡಿಗೇಹಳ್ಳಿಯ ಸಂಜೀವಿನಿ ನಗರದ ನಿವಾಸಿ ಅನುಸೂಯಮ್ಮ ಎಂಬುವರು ಚಿನ್ನದ ಸರವನ್ನು ದೋಚಲಾಗಿದೆ.

 

ಬೆಳಿಗ್ಗೆ 5.30ರ ಸುಮಾರಿಗೆ ಅವರು ಮನೆ ಮುಂದೆ ವಾಯುವಿಹಾರ ಮಾಡುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕುತ್ತಿಗೆಯಲ್ಲಿದ್ದ 70 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮತ್ತೊಂದು ಪ್ರಕರಣ: ಯಲಹಂಕ ಸಮೀಪದ ಮಾರುತಿ ನಗರದ 12ನೇ ಅಡ್ಡರಸ್ತೆಯ ನಿವಾಸಿ ಅಣ್ಣಾಮೇರಿ ಎಂಬುವರು ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಮನೆ ಸಮೀಪ ನಿಂತಿದ್ದಾಗ, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರ ಕುತ್ತಿಗೆಯಲ್ಲಿದ್ದ 60 ಗ್ರಾಂ ಚಿನ್ನದ ಸರವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮತ್ತೊಂದು ಪ್ರಕರಣ: ಕುಮಾರಪಾರ್ಕ್ ಸಮೀಪದ ಟರ್ಪಂಟೇನ್ ರಸ್ತೆಯ ನಿವಾಸಿ ಪುಷ್ಪಾ ಅವರು ಬೆಳಿಗ್ಗೆ 7.30ಕ್ಕೆ ಮನೆ ಸಮೀಪದ ಹಾಲಿನ ಕೇಂದ್ರದಿಂದ ಹಾಲು ತರುತ್ತಿದ್ದ ವೇಳೆ ಬೈಕ್‌ನಲ್ಲಿ ಅವರನ್ನು ಹಿಂಬಾಲಿಸಿದ ಇಬ್ಬರು ದುಷ್ಕರ್ಮಿಗಳು ಅವರ ಕುತ್ತಿಗೆಯಲ್ಲಿದ್ದ ಆರು ಗ್ರಾಂ ಚಿನ್ನದ ಸರವನ್ನು ದೋಚಿದ್ದಾರೆ. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.