ಬೆಂಗಳೂರು: ವಕೀಲರು ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವಿನ ದ್ವೇಷಮಯ ವಾತಾವರಣ ತಿಳಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಂಗಳವಾರ ರಾತ್ರಿ ಎರಡೂ ಕಡೆಯ ಪ್ರತಿನಿಧಿಗಳೊಂದಿಗೆ ಪ್ರತ್ಯೇಕ ಸಂಧಾನ ಸಭೆ ನಡೆಸಿದರು.

ಪರಿಸ್ಥಿತಿ ತಿಳಿಗೊಳಿಸುವುದಕ್ಕೆ ಎರಡೂ ಕಡೆಯ ಪ್ರತಿನಿಧಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಂದೆರಡು ದಿನಗಳಲ್ಲಿ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಕಾನೂನು ಸಚಿವ ಎಸ್.ಸುರೇಶ್ಕುಮಾರ್ ಸಭೆ ನಂತರ ಸುದ್ದಿಗಾರರಿಗೆ ತಿಳಿಸಿದರು.

ಮೊದಲು ವಕೀಲರ ಸಂಘದ ಪದಾಧಿಕಾರಿಗಳು, ಅಡ್ವೊಕೇಟ್ ಜನರಲ್ ವಿಜಯಶಂಕರ್, ಮಾಜಿ ಅಡ್ವೊಕೇಟ್ ಜನರಲ್ಗಳಾದ ಬಿ.ವಿ. ಆಚಾರ್ಯ, ಉದಯ್ ಹೊಳ್ಳ, ಅಶೋಕ ಹಾರ್ನಹಳ್ಳಿ ಸೇರಿ ಇತರ ಹಿರಿಯ ವಕೀಲರ ಜತೆ ಮುಖ್ಯಮಂತ್ರಿ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕೆಲ ವಕೀಲರು ಮಾತನಾಡಿ, ತಮ್ಮ ಮೇಲೂ ಪೊಲೀಸರಿಂದ ದೌರ್ಜನ್ಯ ನಡೆದಿದ್ದು, ಇದಕ್ಕೆ ಕಾರಣರಾದವರನ್ನು ಸೇವೆಯಿಂದ ಅಮಾನತು ಮಾಡಬೇಕು ಎನ್ನುವ ಬೇಡಿಕೆ ಇಟ್ಟರು ಎನ್ನಲಾಗಿದೆ. ಪೊಲೀಸರು ನಡೆಸಿದ ಲಾಠಿ ಪ್ರಹಾರದಿಂದ ಗಾಯಗೊಂಡ ವಕೀಲರ ಛಾಯಾಚಿತ್ರಗಳು ಹಾಗೂ ಜಖಂಗೊಂಡ ವಕೀಲರ ವಾಹನಗಳ ಕುರಿತ ಸಿ.ಡಿ.ಯನ್ನೂ ಮುಖ್ಯಮಂತ್ರಿಯವರಿಗೆ ನೀಡಿದ್ದಾರೆ.

ಬಿ.ವಿ.ಆಚಾರ್ಯ ಸೇರಿದಂತೆ ಕೆಲವು ಹಿರಿಯ ವಕೀಲರು ನ್ಯಾಯಾಲಯದ ಕಲಾಪ ಬಹಿಷ್ಕರಿಸುವುದು ಬೇಡ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು ಎನ್ನಲಾಗಿದೆ.

ಸುಮಾರು ಒಂದು ಗಂಟೆ ಕಾಲ ವಕೀಲರ ಜತೆ ಮಾತುಕತೆ ನಡೆಸಿದ ಮುಖ್ಯಮಂತ್ರಿಯವರು ನಂತರ ಮಾಧ್ಯಮ ಪ್ರತಿನಿಧಿಗಳ ಜತೆಗೂ ಸಮಾಲೋಚನೆ ನಡೆಸಿದರು. ಹಲ್ಲೆ ನಡೆಸಿದ ವಕೀಲರನ್ನು ತಕ್ಷಣ ಬಂಧಿಸಬೇಕು. ಮುಕ್ತ ಮತ್ತು ನಿರ್ಭೀತಿಯಿಂದ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎನ್ನುವ ಬೇಡಿಕೆಯನ್ನು ಮಾಧ್ಯಮ ಪ್ರತಿನಿಧಿಗಳು ಮುಖ್ಯಮಂತ್ರಿ ಮುಂದೆ ಮಂಡಿಸಿದರು. ಇಷ್ಟೇ ಅಲ್ಲದೆ, ಮಾಧ್ಯಮದವರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿದ್ದು, ಅವುಗಳನ್ನು ಹಿಂದಕ್ಕೆ ತೆಗೆಸಲು ಕ್ರಮ ಕೈಗೊಳ್ಳಬೇಕು ಎನ್ನುವ ಬೇಡಿಕೆಯನ್ನೂ ಮಂಡಿಸಲಾಯಿತು.

ನಂತರ ಮುಖ್ಯಮಂತ್ರಿ ಮಾತನಾಡಿ, `ಒಂದೆರಡು ದಿನಗಳಲ್ಲಿ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು. ಸರ್ಕಾರದ ತೀರ್ಮಾನ ಎರಡೂ ಕಡೆಯವರಿಗೆ ಇಷ್ಟವಾಗಿರುತ್ತದೆ. ಹಗೆ ಸಾಧಿಸುವುದು ಬೇಡ~ ಎಂದರು.

ಸಿಬಿಐ ಮತ್ತು ಲೋಕಾಯುಕ್ತ ವಿಶೇಷ ಕೋರ್ಟ್ಗಳನ್ನು ಸಿಟಿ ಸಿವಿಲ್ ನ್ಯಾಯಾಲಯದಿಂದ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ನ್ಯಾಯಾಲಯಕ್ಕೆ ತೆರಳುವ ಮಾಧ್ಯಮವರಿಗೆ ಗುರುತಿನ ಚೀಟಿ ನೀಡುವುದು; ಎಲೆಕ್ಟ್ರಾನಿಕ್ ಮಾಧ್ಯಮದವರಿಗೆ ಕೋರ್ಟ್ ಆವರಣದಲ್ಲಿ ಪ್ರತ್ಯೇಕ ಸ್ಥಳ ನಿಗದಿ ಮಾಡುವುದು ಸೇರಿದಂತೆ ಇತರ ವಿಚಾರಗಳ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜತೆ ಚರ್ಚೆ ನಡೆಸಿ, ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದೂ ಮುಖ್ಯಮಂತ್ರಿ ತಿಳಿಸಿದರು.

ಸಂಧಾನ ಸಭೆಯಲ್ಲಿ ಗೃಹ ಸಚಿವ ಆರ್.ಅಶೋಕ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.