ಪ್ರಧಾನಿ ಜತೆ ಖುರ್ಷಿದ್ ಮಾತುಕತೆ

7

ಪ್ರಧಾನಿ ಜತೆ ಖುರ್ಷಿದ್ ಮಾತುಕತೆ

Published:
Updated:

ನವದೆಹಲಿ/ಲಖನೌ (ಪಿಟಿಐ): ಹಿಂದುಳಿದ ಮುಸ್ಲಿಂ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಶೇ 9ರಷ್ಟು ಒಳ ಮೀಸಲಾತಿ ಕಲ್ಪಿಸಲು ಬದ್ಧವಾಗಿರುವುದಾಗಿ ಹೇಳುವ ಮೂಲಕ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಭಾನುವಾರ ರಾತ್ರಿ ಪ್ರಧಾನಿ ಮನಮೋಹನ್ ಸಿಂಗ್ ಜತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ತಾವು ಉಲ್ಲಂಘನೆ ಮಾಡಿಲ್ಲ ಎಂದು ಪ್ರಧಾನಿ ಅವರಿಗೆ ಮನವರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಖುರ್ಷಿದ್ ವಿರುದ್ಧ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸುವ ಸಲುವಾಗಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಸಂಪುಟದ ಹಿರಿಯ ಸಹೋದ್ಯೋಗಿಗಳ ಜತೆ ಸಭೆ ನಡೆಸಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry