ಸೋಮವಾರ, ಜೂಲೈ 6, 2020
28 °C

ಪ್ರಧಾನಿ ಬಳಿ ಪ್ರತಿಭಟನೆ ದಾಖಲಿಸಿದ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಧಾನಿ ಬಳಿ ಪ್ರತಿಭಟನೆ ದಾಖಲಿಸಿದ ಮೋದಿ

ಅಹಮದಾಬಾದ್ (ಪಿಟಿಐ): ಗುಜರಾತ್‌ನಲ್ಲಿ ನಡೆದ ಹೂಡಿಕೆದಾರರ ಸಮಾವೇಶದ ವೇಳೆ ಏರ್ಪಟ್ಟ ಒಡಂಬಡಿಕೆಗಳ ಸಂಬಂಧ ಆದಾಯ ತೆರಿಗೆ ಇಲಾಖೆಯು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿರುವುದಕ್ಕೆ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರಲ್ಲಿ ಪ್ರತಿಭಟನೆ ವ್ಯಕ್ತಪಡಿಸಿದರು.

ಜನವರಿಯಲ್ಲಿ ನಡೆದ ಸಮಾವೇಶದ ವೇಳೆ ಏರ್ಪಟ್ಟ ತಿಳಿವಳಿಕೆ ಒಪ್ಪಂದಗಳ (ಎಂಒಯು) ಪೈಕಿ 1000 ಕೋಟಿ ರೂಪಾಯಿಗೂ ಹೆಚ್ಚಿನ ಬಂಡವಾಳ ಹೂಡಲು ಮುಂದೆ ಬಂದ ಕಂಪೆನಿಗಳೊಂದಿಗಿನ ಒಪ್ಪಂದಗಳ ಬಗ್ಗೆ ಎಲ್ಲಾ ವಿವರ ಸಲ್ಲಿಸುವಂತೆ ಆದಾಯ ತೆರಿಗೆ ಇಲಾಖೆ ನೋಟಿಸ್‌ನಲ್ಲಿ ಸೂಚಿಸಿದೆ.

ಇಲ್ಲಿನ ಭಾರತೀಯ ಆಡಳಿತ ನಿರ್ವಹಣಾ ಸಂಸ್ಥೆಯ (ಐಐಎಂ) ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಆಗಮಿಸಿದ್ದಾರೆ.ಪೂರ್ವ ನಿರ್ಧಾರಿತ ವೇಳಾಪಟ್ಟಿಯ ಪ್ರಕಾರ ಈ ಇಬ್ಬರ ಭೇಟಿ ನಿಗದಿಯಾಗಿರಲಿಲ್ಲ. ಆದರೆ ನರೇಂದ್ರ ಮೋದಿ ಈ ಸಂದರ್ಭ ಬಳಸಿಕೊಂಡು ಪ್ರಧಾನಿಯವರನ್ನು ಕಂಡು ತಮ್ಮ ತೀವ್ರ ಪ್ರತಿಭಟನೆ ದಾಖಲಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಈ ರೀತಿ ನೋಟಿಸ್ ನೀಡಬಾರದಿತ್ತು ಎಂದು ಅಭಿಪ್ರಾಯಪಟ್ಟ ಪ್ರಧಾನಿ ಮನಮೋಹನ್ ಸಿಂಗ್ ಅವರು, ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದರು ಎಂದೂ ಮೂಲಗಳು ಹೇಳಿವೆ.

 ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.