ಬುಧವಾರ, ಮೇ 12, 2021
26 °C

ಪ್ರಧಾನಿ ಸಿಂಗ್ ಹಾಗೂ ಜರ್ದಾರಿ ನಡುವೆ ಮಾತುಕತೆ - ಕೃಷ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ/ಐಎಎನ್‌ಎಸ್): ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಹಾಗೂ ಪ್ರಧಾನಿ ಮನಮೋಹನಸಿಂಗ್ ಅವರ ಮಧ್ಯೆ ಭಾನುವಾರ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ ಎಂದು ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.ವಿವರವಾದ ಮಾತುಕತೆ ಸಾಧ್ಯವಾಗುತ್ತದೆ ಎಂದು ಹೇಳಲಾಗದು ಎಂದಿರುವ ಸಚಿವರು ಅಜ್ಮೇರಾಗೆ ಜರ್ದಾರಿ ತೆರಳುವ ಮುನ್ನ ನವದೆಹಲಿಯಲ್ಲಿ ಪ್ರಧಾನಿ ಮನಮೋಹನಸಿಂಗ್ ಅವರೊಂದಿಗೆ ಭೋಜನಕೂಟದಲ್ಲಿ ಪಾಲ್ಗೊಳ್ಳುವುದನ್ನು ಖಚಿತಪಡಿಸಿದರು.ಈ ಮಧ್ಯೆ ಪಾಕ್‌ನಲ್ಲಿರುವ ಮುಂಬೈ ದಾಳಿ ರೂವಾರಿ ಹಫೀಜ್ ಸಯೀದ್ ಕುರಿತಂತೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಸಿದ ಅವರು ಮುಂಬೈ ದಾಳಿಯ ಹಿಂದೆ ಹಫೀಜ್ ಕೈವಾಡದ ಬಗ್ಗೆ ಎಲ್ಲಾ ಸಾಕ್ಷಾಧ್ಯಾರಗಳನ್ನು ಮತ್ತೆ ಮತ್ತೆ ಭಾರತ ಪಾಕಿಸ್ತಾನಕ್ಕೆ ಒದಗಿಸಿದಾಗ್ಯೂ ಪಾಕ್ ತನಿಖೆ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.