ಶುಕ್ರವಾರ, ಜೂನ್ 18, 2021
28 °C

ಪ್ರಧಾನಿ, ಸಿ.ಎಂ ಪರಿಹಾರ ನಿಧಿ ನೆರವಿಗೆ ನೀತಿ ಸಂಹಿತೆ ಅಡ್ಡಿ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂಡಿಗಡ (ಪಿಟಿಐ): ಪ್ರಧಾನಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಚಿಕಿತ್ಸೆಗಾಗಿ ನೆರವು ನೀಡುವುದಕ್ಕೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.ಆದರೆ ಪರಿಹಾರಕ್ಕೆ ಫಲಾನುಭವಿಗಳನ್ನು ಸಂಬಂಧಿತ ಸರ್ಕಾರಿ ಇಲಾಖೆಯ ಮುಖ್ಯಸ್ಥರು ಅಥವಾ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಆಯ್ಕೆ ಮಾಡಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ.ಹೃದಯ ಶಸ್ತ್ರಕ್ರಿಯೆ, ಕಿಡ್ನಿ ಸಮಸ್ಯೆ ಮತ್ತು ಕ್ಯಾನ್ಸರ್‌ನಂತಹ ಅನಾರೋಗ್ಯದ ಸಂದರ್ಭದಲ್ಲಿ ಚಿಕಿತ್ಸೆಗಾಗಿ ಪ್ರಧಾನಿ ಅಥವಾ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ನೀಡಲಾಗುತ್ತದೆ. ಇದು ತುರ್ತಾಗಿ ಒದಗಿಸಬೇಕಾದ ನೆರವಾಗಿದ್ದು ವಿಳಂಬ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.