ಭಾನುವಾರ, ಜೂನ್ 13, 2021
22 °C

ಪ್ರಧಾನಿ ಹುದ್ದೆ ತ್ಯಜಿಸಲು ಗಿಲಾನಿ ಸಿದ್ಧ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಅಧ್ಯಕ್ಷ ಜರ್ದಾರಿ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಯನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ತೀವ್ರ ಒತ್ತಡಕ್ಕೆ ಸಿಲುಕಿರುವ ಪ್ರಧಾನಿ ಯುಸೂಫ್ ರಜಾ ಗಿಲಾನಿ ಅವರು ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ತಮ್ಮ ವಿರುದ್ಧ ತೀರ್ಪು ನೀಡಿದರೆ ಪ್ರಧಾನಿ ಹುದ್ದೆ ತ್ಯಜಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಪಾಕಿಸ್ತಾನ ಪೀಪಲ್ಸ್ ಪಕ್ಷ ಮತ್ತು ಮಿತ್ರ ಪಕ್ಷಗಳ ಜತೆ ಸಮಾಲೋಚಿಸಿರುವ ಗಿಲಾನಿ ಅವರು, ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ ಎಂದು ಡೈಲಿ ಟೈಮ್ಸ  ಪತ್ರಿಕೆ ವರದಿ ಮಾಡಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.