ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಮತ್ತು ಸಾಲೆತ್ತೂರು ಮಾತ್ರವಲ್ಲದೆ ಮಂಗಳೂರು ತಾಲ್ಲೂ ಕಿನ ಗುರುಪುರದಲ್ಲಿ ನಡೆದ ಹಿಂದೂ ಸಮಾ ಜೋತ್ಸವದಲ್ಲಿ ಆರ್ಎಸ್ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಆವರು ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನ ಕಾರಿ ಭಾಷಣ ಮಾಡಿದ್ದಾರೆ. ಆವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ತಾಲ್ಲೂಕಿನ ಬಿ.ಸಿ.ರೋಡ್ ನಗರ ಪೊಲೀಸ್ ಠಾಣೆಗೆ ಶುಕ್ರವಾರ ಸಂಜೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯ ಕರ್ತರು ಮೆರವಣಿಗೆಯಲ್ಲಿ ಬಂದು ಎಸ್ಪಿ ಡಾ.ಶರಣಪ್ಪ ಇವರಿಗೆ ಮನವಿ ಸಲ್ಲಿಸಿದರು.

ಕಲ್ಲಡ್ಕದಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಸಾಮರಸ್ಯ ಸಮಾವೇಶದಲ್ಲಿ ಸ್ಥಳೀಯ ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಅವರು ಭಟ್ಟರ ವಿರುದ್ಧ ವೈಯಕ್ತಿಕ ನಿಂದನೆ ಮಾಡದಿದ್ದರೂ ಸಹ ಬಿಜೆಪಿ ಅನಗತ್ಯ ಆರೋಪ ಮಾಡುತ್ತಿದೆ. ಅಂದಿನ ಸಮಾವೇಶದಲ್ಲಿ ಪಾಲ್ಗೊಂ ಡಿದ್ದ ನರಿಕೊಂಬು ಗ್ರಾ.ಪಂ.ಮಾಜಿ ಅಧ್ಯಕ್ಷ ಆನಂದ ಸಾಲ್ಯಾನ್ ತಲೆಗೆ ಕಲ್ಲೆಸೆತದಿಂದ ಗಾಯವಾಗಿದ್ದು, ಪಕ್ಷದ ಮುಖಂಡರಾದ ಕೆ.ಸಂಜೀವ ಪೂಜಾರಿ ಬೊಳ್ಳಾಯಿ, ಬೋಳಂತೂರು ಚಂದ್ರ ಶೇಖರ ರೈ, ಮಾಧವ ಎಸ್.ಮಾವೆ ಇವರ ಕಾರಿನ ಕಿಟಕಿ ಗಾಜಿಗೆ ಕಲ್ಲು ತೂರಿ ಹಾನಿಗೊಳಿಸಲಾಗಿದೆ. ಇನ್ನೊಂ ದೆಡೆ ಕಾಂಗ್ರೆಸ್ ಕಾರ್ಯಕರ್ತ ವೀರ ಕಂಭ ನಿವಾಸಿ ರಾಘವ ಪೂಜಾರಿ ಬೈಕಿಗೆ ಹಾನಿ ಮಾಡಲಾಗಿದ್ದು, ಇನ್ನೊಬ್ಬರ ಕಾರಿಗೆ ಬೆಂಕಿ ಹಚ್ಚಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಕೆ.ಹರಿಕೃಷ್ಣ ಬಂಟ್ವಾ ಳ್ ಮತ್ತು ಜಿ.ಪಂ.ಸದಸ್ಯ ಎಂ.ಎಸ್. ಮಹಮ್ಮದ್ ಆರೋಪಿಸಿದರು.

ಈಗಾಗಲೇ ಡಾ.ಪ್ರಭಾಕರ ಭಟ್ಟರು ಮತ್ತು ಚಂದ್ರಪ್ರಕಾಶ ಶೆಟ್ಟಿ ಅವರು ಮಾಡಿರುವ ಭಾಷಣವನ್ನು ಸ್ವತಃ ಪೊಲೀಸರು ಚಿತ್ರೀಕರಣಗೊಳಿಸಿದ್ದು, ಅದನ್ನು ಸಮಗ್ರವಾಗಿ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿ.ಪಂ.ಸದಸ್ಯೆ ಮಮತಾ ಎಸ್.ಗಟ್ಟಿ, ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕೆ.ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಆಲಿ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಮಾಧವ ಎಸ್.ಮಾವೆ, ಸದಸ್ಯರಾದ ಬಿ.ಪದ್ಮಶೇಖರ ಜೈನ್, ಐಡಾ ಸುರೇಶ್, ಎಪ್ರಿಯಂ ಸಿಕ್ವೇರ, ಪಕ್ಷದ ಪ್ರಮುಖರಾದ ಪಿಯೂಸ್ ಎಲ್.ರಾಡ್ರಿಗಸ್, ಕೆ.ಸಂಜೀವ ಪೂಜಾರಿ ಬೊಳ್ಳಾಯಿ, ಫ್ಲೋಸಿ ಡಿಸೋಜ, ಪುರಸಭಾ ಸದಸ್ಯರಾದ ವಾಸು ಪೂಜಾರಿ, ಪ್ರವೀಣ ಜಕ್ರಿಬೆಟ್ಟು, ಜಗದೀಶ ಕುಂದರ್, ಗಂಗಾಧರ ಪೂಜಾರಿ, ಮಾಜಿ ಸದಸ್ಯ ರಿಯಾಜ್ ಹುಸೇನ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.