ಪ್ರಭುದೇವ್ ರಾಜೀನಾಮೆ

7

ಪ್ರಭುದೇವ್ ರಾಜೀನಾಮೆ

Published:
Updated:

ಬೆಂಗಳೂರು: ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಶನಿವಾರ ಭೇಟಿ ಮಾಡಿರುವ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ಪ್ರಭುದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.`ಕರ್ನಾಟಕ ಆರೋಗ್ಯ ವ್ಯವಸ್ಥೆ ಆಯೋಗದ ಅಧ್ಯಕ್ಷ ಹುದ್ದೆಗೆ ರಾಜ್ಯ ಸರ್ಕಾರ ತಮ್ಮನ್ನು ನೇಮಕ ಮಾಡಿರುವ ಆದೇಶದ ಪ್ರತಿ ಇದೇ 10ರಂದು ದೊರಕಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಿ ಹೊಸ ಹುದ್ದೆಯನ್ನು ಒಪ್ಪಿಕೊಂಡಿರುವ ವಿಚಾರವನ್ನು ತಿಳಿಸಿ ಕುಲಪತಿ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಮನವಿ ಪತ್ರ ಸಲ್ಲಿಸಿದೆ~ ಎಂದು ಕುಲಪತಿ ಡಾ.ಎನ್.ಪ್ರಭುದೇವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕುಲಪತಿಯಾಗಿ ಪ್ರಭುದೇವ್ ಅವರ ಅಧಿಕಾರಾವಧಿ ಮುಂದಿನ ವರ್ಷದ ಫೆಬ್ರುವರಿವರೆಗೆ ಇತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry