ಬೆಂಗಳೂರು: ಬಸ್ ಪ್ರಯಾಣದರ ಏರಿಸಿರುವುದು ಜನವಿರೋಧಿ ನೀತಿಯಾಗಿದ್ದು, ಕೂಡಲೇ ದರ ಇಳಿಸಬೇಕು. ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ವಿಧಿಸುತ್ತಿರುವ ತೆರಿಗೆಯನ್ನು ಕಡಿಮೆ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಬಿಪಿಎಲ್ ಕುಟುಂಬಗಳಿಗೆ 1 ರೂಪಾಯಿಗೆ ಕೆ.ಜಿ. ಅಕ್ಕಿ ನೀಡುವುದಾಗಿ ಪ್ರಕಟಿಸಿರುವ ಸರ್ಕಾರ, ಬಸ್ ಪ್ರಯಾಣ ದರ ಏರಿಸುವ ಮೂಲಕ ಬಡವರಿಗೆ ದೊಡ್ಡ ಪೆಟ್ಟು ನೀಡಿದೆ. ಬಿಪಿಎಲ್ ಕುಟುಂಬದವರು ಬಸ್ನಲ್ಲಿ ಓಡಾಡುವುದೇ ಕಷ್ಟವಾಗಲಿದೆ. ವಾಸ್ತವ ಸ್ಥಿತಿ ಅರ್ಥ ಮಾಡಿಕೊಂಡು ಪ್ರಯಾಣದರ ಇಳಿಸಬೇಕು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಡೀಸೆಲ್, ಪೆಟ್ರೋಲ್ ಮೇಲೆ ಅತಿ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಬಜೆಟ್ನಲ್ಲಿ ತೆರಿಗೆ ಕಡಿತ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಮತ್ತಷ್ಟು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಸೂಕ್ತವಲ್ಲ. ಮದ್ಯದ ಅಂಗಡಿ ನಡೆಸಲು ಪದವಿ ಬೇಕಾಗಿಲ್ಲ. ಪದವೀಧರರನ್ನು ಆ ಹಂತಕ್ಕೆ ತೆಗೆದುಕೊಂಡು ಹೋಗುವುದು ಸರಿಯಲ್ಲ. ಮುಖ್ಯಮಂತ್ರಿ ಆದ ಕೂಡಲೇ ಸಿದ್ದರಾಮಯ್ಯ ಅವರ ಕಣ್ಣು ಅಗ್ಗದ ಮದ್ಯ, ಸಾರಾಯಿ ಕಡೆಯತ್ತ ಹೋಗುತ್ತಿದೆ ಎಂದು ವ್ಯಂಗ್ಯವಾಡಿದರು.

ಮರಳು ಸಾಗಿಸುವ ಲಾರಿಗಳನ್ನು ತಡೆದು ಕಿರುಕುಳ ನೀಡುವ ಬದಲು, ಮರಳು ನೀತಿ ಜಾರಿಗೆ ತರುವ ಮೂಲಕ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕು. ಜನಪ್ರತಿನಿಧಿಗಳ ಸ್ನೇಹಿತರು, ಕುಟುಂಬ ವರ್ಗದವರು ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದಾರೆ. ಯಾವುದೇ ದಾಕ್ಷಿಣ್ಯಕ್ಕೆ ಒಳಗಾಗದೆ ಅಕ್ರಮಗಳನ್ನು ತಡೆಯಬೇಕು ಎಂದು ಆಗ್ರಹಿಸಿದರು.

ಕಠಿಣ ಕ್ರಮಕೈಗೊಳ್ಳಿ: ಮಣಿಪಾಲ್ ವಿಶ್ವವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರವನ್ನು ಖಂಡಿಸಿದ ಅವರು, ದೆಹಲಿಯಲ್ಲಿ ನಡೆದಂತಹ ದುಷ್ಕೃತ್ಯಗಳು ರಾಜ್ಯಕ್ಕೆ ಕಾಲಿಡುತ್ತಿವೆ. ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೈಗಾರಿಕೆಗಳ ಸ್ಥಾಪನೆಗೆ ಅನುಮತಿ ನೀಡುವ ಉನ್ನತಾಧಿಕಾರ ಸಮಿತಿ ಸಭೆಯನ್ನು ಕೊನೆಗಳಿಗೆಯಲ್ಲಿ ರದ್ದುಪಡಿಸಿ ಉದ್ಯಮಿಗಳಿಗೆ ಅಗೌರವ ತೋರಿಸಿರುವುದು ಸರಿಯಲ್ಲ. ಇದರಿಂದಾಗಿ ಅವರಲ್ಲಿ ರಾಜ್ಯದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತದೆ. ಅನುಮತಿ ನೀಡುವುದು, ಬಿಡುವುದು ಬೇರೆ ಪ್ರಶ್ನೆ. ಸೌಜನ್ಯಕ್ಕಾದರೂ ಅವರೊಂದಿಗೆ ಮಾತನಾಡಬೇಕಾಗಿತ್ತು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.