ಬುಧವಾರ, ಮೇ 12, 2021
18 °C

ಪ್ರಯಾಣ ದರ ಏರಿಕೆ: ಬಿಜೆಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಡೀಸೆಲ್, ಪೆಟ್ರೋಲ್ ಹಾಗೂ ಬಸ್ ಪ್ರಯಾಣ ದರ ಹೆಚ್ಚಳ ವಿರೋಧಿಸಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದವರು ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿದರು.ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಮೆರವಣಿಗೆ ನಡೆಸಿದರು.`ಕೇಂದ್ರದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುತ್ತಿದೆ. ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ' ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಕವಟಗಿ ದೂರಿದರು.ಸಂಸದ ರಮೇಶ ಜಿಗಜಿಣಗಿ, `ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ನಿರಂತರವಾಗಿ ಹೆಚ್ಚಿಸಿ ದಾಖಲೆ ನಿರ್ಮಿಸಿರುವ ಯುಪಿಎ ಸರ್ಕಾರ, ಮತ್ತೊಮ್ಮೆ ಬೆಲೆ ಏರಿಕೆ ಮಾಡಿದೆ. ಇದರಿಂದ ದಿನಬಳಕೆ ವಸ್ತುಗಳ ಬೆಲೆಯೂ ಹೆಚ್ಚಳವಾಗಲಿದೆ. ಇದು ದೇಶದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ' ಎಂದು ಎಚ್ಚರಿಸಿದರು.ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, `ಪ್ರತಿ ಬಡ ಕುಟುಂಬಕ್ಕೆ 30ಕೆ.ಜಿ ಅಕ್ಕಿ ಕೊಡುವುದಾಗಿ ಘೋಷಿಸಿದ್ದ ರಾಜ್ಯ ಸರ್ಕಾರ, ಈಗ ಕುಟುಂಬದ ಜನಸಂಖ್ಯೆಗೆ ಅನುಗುಣಗವಾಗಿ ಅಕ್ಕಿ ವಿತರಿಸುತ್ತೇವೆ ಎನ್ನುತ್ತಿದೆ. ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಕಾಂಗ್ರೆಸ್ ಸರ್ಕಾರಕ್ಕೆ ಜನತೆಯ ಮೇಲೆ ಇರುವ ಕಾಳಜಿಯನ್ನು ತೋರಿಸುತ್ತದೆ' ಎಂದು ಟೀಕಿಸಿದರು.`ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ದರ ಇಳಿಕೆ ಮಾಡಬೇಕು.  ಬಸ್‌ಪ್ರಯಾಣ ದರ ಏರಿಕೆಯನ್ನು ರಾಜ್ಯ ಸರ್ಕಾರ ವಾಪಸ್ಸು ಪಡೆಯಬೇಕು. ಪ್ರತಿ ಕಡುಬಡವ ಕುಟುಂಬಕ್ಕೆ 30 ಕೆ.ಜಿ. ಅಕ್ಕಿ ವಿತರಿಸಬೇಕು. ಇಲ್ಲದಿದ್ದರೆ ಬಿಜೆಪಿ ಹೋರಾಟ ನಡೆಸಲಿದೆ' ಎಂದರು.ರಾಜು ಮಗಿಮಠ, ಹಣಮಂತ ಬಿರಾದಾರ, ಪ್ರಕಾಶ ಅಕ್ಕಲಕೋಟ, ಚಿದಾನಂದ ಔರಂಗಾಬಾದ, ಚಿದಾನಂದ ಚಲವಾದಿ, ಚನ್ನಪ್ಪಗೌಡ ಬಿರಾದಾರ ಇತರರು ಇದ್ದರು.`ಮಹಿಳೆಗೆ ದೊರೆಯದ ರಾಜಕೀಯ ಸ್ಥಾನಮಾನ'

ವಿಜಾಪುರ:ವಿಶ್ವದಲ್ಲಿ ಮಹಿಳೆಯರಿಗೆ ಶೇ.7 ರಷ್ಟು ಮಾತ್ರ ರಾಜಕೀಯ ಸ್ಥಾನಮಾನ ನೀಡಲಾಗಿದ್ದು, ಇದು ತೀರಾ ಕಡಿಮೆ ಎಂದು ಅಲಿಘಡ ಮುಸಿಂ್ಲ ವಿಶ್ವವಿದ್ಯಾಲಯದ ರಾಜಶಾಸ್ತ್ರ ಪ್ರಾಧ್ಯಾಪಕ ಎ.ಪಿ. ವಿಜಾಪುರ ಹೇಳಿದರು.ಇಲ್ಲಿಯ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ `ಮಹಿಳೆಯರ ಮೇಲೆ ಜಾಗತೀಕರಣದ ಪರಿಣಾಮ' ಕುರಿತು ಏರ್ಪಡಿಸಿದ್ದ ಉಪನ್ಯಾಸಗೋಷ್ಠಿಯಲ್ಲಿ ಮಾತನಾಡಿದರು.ರಾಜ್ಯಶಾಸ್ತ್ರ ವಿಭಾಗ ಸಂಯೋಜಕ ಪ್ರೊ.ಎಂ.ಬಿ. ದಿಲ್‌ಷಾದ್ ಅಧ್ಯಕ್ಷತೆ ವಹಿಸಿದ್ದರು. ರಂಜೀತ ಎನ್.ಪಿ. ಸ್ವಾಗತಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.